ಕಲಬುರಗಿ: ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿ ನಗರ ಸಭೆ ಅಧ್ಯಕ್ಷೆ ಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದ ಘಟನೆ ಶಹಬಾದ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಗಿರೀಶ್ ಕಂಬನೂರ್ (42) ಕೊಲೆಯಾದ ವ್ಯಕ್ತಿ. ಕಾಂಗ್ರೆಸ್ ಪಕ್ಷದ ಮುಖಂಡ ಗೀರಿಶ್ ಕಂಬನೂರ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್.ಲ ಆದರೆ ಹಳೆ ವೈಷಮ್ಯದ ಹಿನ್ನಲೆ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಶಹಬಾದ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಟಿಕೆಟ್ ಬುಕ್ ಮಾಡಲು ಬಂದಾಗ ಗೀರಿಶ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ದೇಹದಲ್ಲಿಯೇ ಬಿಟ್ಟು ಪಲಾಯನಗೈದಿದ್ದಾರೆ. ರಕ್ತದ ಮಡುವಿನಲ್ಲಿ ನರಳಾಡಿದ ಗೀರಿಶ್ ಪ್ರಾಣಬಿಟ್ಟಿದ್ದಾರೆ. ಕಳೆದ 2 ವರ್ಷದ ಹಿಂದೆ ಗಿರೀಶ್ ಸಹೋದರ ಸತೀಶ್ ಕಂಬನೂರ್ ಅವರನ್ನು ಹತ್ಯೆಗೈಯಲಾಗಿತ್ತು.
ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರೀಶಿಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗೆ ಶವ ಸ್ಥಳಾಂತರಿಸಲಾಗಿದೆ. ಈ ಕುರಿತು ಶಹಬಾದ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿರುವ ಪೊಲೀಸರು ಹಂತಕರ ಬಂಧನಕ್ಕೆ ಪ್ರಯತ್ನಿಸುತ್ತಿದ್ದಾರೆ.




