ಬೆಂಗಳೂರು: ತಮ್ಮನ್ನು ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿಸಲು ಪಿತೂರಿ ನಡೆಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಆರೋಪಿಸಿರುವ ಪ್ರಕರಣದ ಬಗ್ಗೆ ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ಈ ಸಂಬಂಧ ವಿಚಾರಣೆಗೆ ವಿಚಾರಣೆಗೆ ಹಾಜರಾಗುವಂತೆ ರಾಜಣ್ಣ ಅವರಿಗೆ ಸೂಚಿಸಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಆದರೆ ತಕ್ಷಣ ವಿಚಾರಣೆಗೆ ಹಾಜರಾಗಲು ನಿರಾಕರಿಸಿರುವ ರಾಜಣ್ಣ ಯುಗಾದಿ ಮತ್ತು ರಂಜಾನ್ ನಂತರ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದು, ಇದಕ್ಕೆ ಸಮಯವಕಾಶ ನೀಡುವಂತೆ ಸಿಐಡಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಈ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುವ ಸಲುವಾಗಿ ಸಚಿವರನ್ನು ಸಂಪರ್ಕಿಸಿ ಹೇಳಿಕೆ ಪಡೆಯಲು ಅಧಿಕಾರಿಗಳು ಮಾಡಿದ್ದ ಕರೆ ಸ್ವೀಕರಿಸಿದ ರಾಜಣ್ಣ, ಯುಗಾದಿ ಹಾಗೂ ಹೊಸ ತೊಡಕು ಮುಗಿದ ಬಳಿಕ ವಿಚಾರಣೆಗೆ ಹಾಜರಾಗುತ್ತೇನೆ, ಪ್ರಕರಣದ ಬಗ್ಗೆ ವಿವರ ಕೊಡುತ್ತೇನೆ ಎಂದು ಸಮಯಾವಕಾಶ ಕೇಳಿದ್ದಾರೆ. ಇದಕ್ಕೆ ಸಹಮತಿಸಿದ ಅಧಿಕಾರಿಗಳು, ಯುಗಾದಿ ನಂತರ ವಿಚಾರಣೆ ಚುರುಕುಗೊಳಿಸಲು ನಿರ್ಧರಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಹನಿಟ್ರ್ಯಾಪ್ ಯತ್ನ ಕುರಿತು ವಿಚಾರಣೆ ಆರಂಭಿಸಿರುವ ಸಿಐಡಿ ಅಧಿಕಾರಿಗಳು, ನಗರದಲ್ಲಿರುವ ಸಚಿವರ ಸರ್ಕಾರಿ ಅಧಿಕೃತ ನಿವಾಸಕ್ಕೆ ತೆರಳಿ ಪ್ರಾಥಮಿಕ ಹಂತದ ಪರಿಶೀಲನೆ ನಡೆಸಿದ್ದರು. ಕೆ.ಎನ್.ರಾಜಣ್ಣ ಅವರ ಹನಿಟ್ರ್ಯಾಪ್ ಪ್ರಕರಣದ ವಿಚಾರಣೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಈಗಾಗಲೇ ಸಿಐಡಿ ವಿಚಾರಣೆ ಆರಂಭಿಸಿದ್ದು, ಈ ಪ್ರಕರಣದಲ್ಲಿ ವಿವರಣೆ ಪಡೆಯುವ ಸಂಬಂಧ ಸಚಿವರಿಗೆ ನೋಟಿಸ್ ನೀಡಲು ಮುಂದಾಗಿದೆ. ಎರಡು ದಿನಗಳ ಹಿಂದೆ ಸಚಿವ ರಾಜಣ್ಣ ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿ ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ನಡೆಸಿದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಮನವಿ ಕೊಟ್ಟಿದ್ದರು.




