ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಮತಗಳ್ಳತನ ಆಂದೋಲನ ಕುರಿತು ವಿವಾದಾಸ್ಪದ ಹೇಳಿಕೆ ನೀಡಿ ಸಚಿವ ಸ್ಥಾನ ಕಳೆದುಕೊಂಡಿರುವ ಹಿರಿಯ ನಾಯಕ ಕೆ ಎನ್ ರಾಜಣ್ಣ ಇದೀಗ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಸುದೀರ್ಘ ಪತ್ರ ಬರೆದಿದ್ದು ಭೇಟಿಗೆ ಸಮಯಾವಕಾಶ ನೀಡುವಂತೆ ಕೋರಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಎಂಟು ಪುಟಗಳ ಪತ್ರ ಬರೆದಿರುವ ರಾಜಣ್ಣ, ಅದರಲ್ಲಿ ರಾಜ್ಯ ಕಾಂಗ್ರೆಸ್ ನಲ್ಲಿ ನಡೆದಿರುವ ಹಲವು ವಿದ್ಯಮಾನಗಳು ಮತ್ತು ಕರ್ನಾಟಕದಲ್ಲಿ ನಡೆದಿರುವ ಮತಗಳ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಈ ಎಲ್ಲ ವಿಚಾರಗಳ ಬಗ್ಗೆ ತಮ್ಮೊಂದಿಗೆ ಮುಕ್ತವಾಗಿ ಮಾತನಾಡಲು ಬಯಸುತ್ತಿದ್ದು, ಅದಕ್ಕಾಗಿ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಅಧಿಕಾರ ಹಸ್ತಾಂತರ ಕುರಿತು ದೊಡ್ಡ ಮಟ್ಟದ ಚರ್ಚೆ ನಡೆದಿರುವ ಬೆನ್ನಲ್ಲೇ ಡಿಸಿಎಂ ಡಿ ಕೆ ಶಿವಕುಮಾರ್ ಅವರು ರಾಜಣ್ಣ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದರ ನಡುವೆಯೇ ಅವರು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿರುವುದು ಕುತೂಹಲ ಮೂಡಿಸಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ರಾಹುಲ್ ಗಾಂಧಿ ಅವರಿಗೆ ಎಂಟು ಪುಟಗಳ ಪತ್ರವನ್ನು ಬರೆದಿರುವ ರಾಜಣ್ಣ ಅವರು ಮತಗಳ್ಳತನದ ಕುರಿತು ತಾವು ನೀಡಿರುವ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ನಿಮಗೆ ಮಾಹಿತಿ ನೀಡಿದ್ದಾರೆ. ನಾವು ಯಾವ ರೀತಿಯಲ್ಲೂ ಕಾಂಗ್ರೆಸ್ ಪಕ್ಷದ ಹೋರಾಟದ ವಿರುದ್ಧ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಹುಲ್ ಗಾಂಧಿಗೆ ಬರೆದ ಪತ್ರದಲ್ಲಿ ತಾನು ತುಮಕೂರು ಜಿಲ್ಲೆಯ ಮಧುಗಿರಿ ವಿಧಾನಸಭಾ ಕ್ಷೇತ್ರದ ಪ್ರಸ್ತುತ ಶಾಸಕನಾಗಿದ್ದು, ಕರ್ನಾಟಕ ಸರ್ಕಾರದಲ್ಲಿ ಸಹಕಾರ ಸಚಿವನಾಗಿಯೂ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವನಾಗಿಯೂ ಈ ಹಿಂದೆ ಸೇವೆ ಸಲ್ಲಿಸಿದ್ದೇನೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಸಚಿವ ಸಂಪುಟದಿಂದ ತನ್ನನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ, ಕೆಲ ಪ್ರಮುಖ ವಿಷಯಗಳನ್ನು ಗಮನಕ್ಕೆ ತರುತ್ತಿದ್ದೇನೆ ಎಂದು ಹೇಳಿದ್ದಾರೆ.
ಮತಗಳ್ಳತನದ ವಿರುದ್ಧ ತಾವು ನಡೆಸುತ್ತಿರುವ ಹೋರಾಟವನ್ನು ತಾನು ಹೃದಯಪೂರ್ವಕವಾಗಿ ಬೆಂಬಲಿಸಿದ್ದೇನೆ.ಇಂತಹ ಮಹತ್ವದ ವಿಷಯಗಳನ್ನು ದೇಶದ ಮುಂದೆ ಇಡುವ ನಿಮ್ಮ ನಾಯಕತ್ವ ಮತ್ತು ಮುಂದಾಳತ್ವವನ್ನು ಆಳವಾಗಿ ಮೆಚ್ಚುತ್ತೇನೆ. ನಾನು ನೀಡಿದ್ದ ಹೇಳಿಕೆಯ ಉದ್ದೇಶ ಏನೆಂದರೆ, ಕೆಪಿಸಿಸಿ ನೇಮಕ ಮಾಡಿದ ಬಿಎಲ್ಏಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿಲ್ಲ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಮತ್ತು ಸಂಬಂಧಿಸಿದವರು ಈ ಲೋಪಗಳತ್ತ ಸೂಕ್ತ ಗಮನ ನೀಡಿದ್ದರೆ, ಅವುಗಳನ್ನು ತಪ್ಪಿಸಬಹುದಾಗಿತ್ತು ಎಂದು ಹೇಳಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಹಾಗಿದ್ದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಇನ್ನೂ 8 ರಿಂದ 10 ಸ್ಥಾನಗಳನ್ನು ಹೆಚ್ಚಾಗಿ ಗೆಲ್ಲುವ ಸಾಧ್ಯತೆ ಇತ್ತು. ಇದೇ ರೀತಿಯ ಲೋಪಗಳನ್ನು ಇತರ ರಾಜ್ಯಗಳಲ್ಲಿಯೂ ತಪ್ಪಿಸಿದ್ದರೆ, ಲೋಕಸಭೆಯಲ್ಲಿ ಇನ್ನೂ 30 ರಿಂದ 40 ಸ್ಥಾನಗಳನ್ನು ಹೆಚ್ಚಾಗಿ ಗೆಲ್ಲಬಹುದಾಗಿತ್ತು. ಆ ಪರಿಸ್ಥಿತಿಯಲ್ಲಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಆಗುತ್ತಿರಲಿಲ್ಲ. ಬದಲಾಗಿ ಕಾಂಗ್ರೆಸ್ ಪಕ್ಷವೇ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು, ನಮ್ಮ ಪ್ರಿಯ ಯುವ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಮಂತ್ರಿಯಾಗುತ್ತಿದ್ದರು ಎಂಬ ಹೇಳಿಕೆ ನೀಡಿದ್ದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ತಮ್ಮ ರಾಜಕೀಯ ಜೀವನ, ಕಾಂಗ್ರೆಸ್ ಪಕ್ಷದ ಮೇಲಿನ ನಿಷ್ಠೆ, ಸಚಿವನಾಗಿ ಮಾಡಿದ ಕೆಲಸಗಳು ಸೇರಿ ತಮ್ಮ ರಾಜಕೀಯ ಸಾಧನೆ ಬಗ್ಗೆಯೂ ಪತ್ರದಲ್ಲಿ ರಾಜಣ್ಣ ಉಲ್ಲೇಖಿಸಿದ್ದು, ಸತ್ಯಾಸತ್ಯತೆಯನ್ನು ನಿಮ್ಮಮುಂದಿಡುವ ಸಲುವಾಗಿ ಈ ಪತ್ರ ಬರೆದಿದ್ದೇನೆ. ಜೊತೆಗೆ, ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿ, ತಪ್ಪು ರೀತಿಯಲ್ಲಿ ನಿಮ್ಮ ಗಮನಕ್ಕೆ ತಂದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿನಂತಿಸುತ್ತೇನೆ. ಈ ವಿಷಯಗಳ ಕುರಿತು ವಿವರವಾಗಿ ಚರ್ಚಿಸಲು, ಭೇಟಿಗೆ ಸಮಯ ನೀಡುವಂತೆ ಕೋರಿದ್ದಾರೆ.





