ಬೆಂಗಳೂರು: ಸಹಕಾರ ಸಚಿವರಾಗಿದ್ದ ಕೆ.ಎನ್ .ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವ ವಿಚಾರವು ಪಕ್ಷದ ಆಂತರಿಕ ವಿಚಾರವಾಗಿದೆ ಇದರ ಬಗ್ಗೆ ಹಚ್ಚಿನ ವಿವರ ನೀಡುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ವಿಧಾನ ಪರಿಷತ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಶೂನ್ಯ ವೇಳೆಯಲ್ಲಿ ಕೆ.ಎನ್ಾ.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸಿಎಂಗಳು ಸದನಕ್ಕೆ ಸೂಕ್ತ ಕಾರಣ ನೀಡಬೇಕು ಎಂದು ಒತ್ತಾಯಿಸಿದರು.
ರಾಜಣ್ಣ ಅವರನ್ನ ಸಚಿವ ಸ್ಥಾನದಿಂದ ಯಾಕೆ ವಜಾ ಮಾಡಲು ಕಾರಣಗಳ ಬಗ್ಗೆ ಸರ್ಕಾರದಿಂದ ಸೂಕ್ತ ಉತ್ತರ ಬಂದಿಲ್ಲ. ಈ ಬಗ್ಗೆ ತಿಳಿಸಬೇಕೆಂದು ಆಗ್ರಹಿಸಿದರು. ಈ ಬಗ್ಗೆ ಈಗಾಗಲೇ ಉತ್ತರ ನೀಡಲಾಗಿದ್ದು ಮತ್ತೆ ಈ ವಿಷಯ ಪ್ರಸ್ತಾಪಿಸುವುದರಲ್ಲಿ ಆರ್ಥವಿಲ್ಲ ಎಂದು ಸಭಾನಾಯಕ ಬೋಸ್ ರಾಜ್ ತಿಳಿಸಿದರು. ಈ ವೇಳೆ ಆಡಳಿತ-ವಿರೋಧ ಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.
ಈ ವೇಳೆ ಮಧ್ಯೆಪ್ರವೇಶಿಸಿದ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ ಈ ವಿಷಯದ ಬಗ್ಗೆ ಸಭಾನಾಯಕರು ಉತ್ತರಿಸಿದ್ದಾರೆ. ಈ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ ಎಂದು ರೂಲಿಂಗ್ ನೀಡಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಛಲವಾದಿ ನಾರಾಯಣಸ್ಚಾಮಿ, ರಾಜಣ್ಣ ಅವರನ್ನ ಸಚಿವ ಸ್ಥಾನದಿಂದ ವಜಾಗೊಳಿಸುವ ಮೂಲಕ ದಲಿತ ನಾಯಕನನ್ನ ತುಳಿದಿದ್ದೀರಿ ಇದು ಕಾಂಗ್ರೆಸ್ ಸಂಸ್ಕೃತಿಯಾಗಿದೆ ಎಂದು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಅದು ನಿಮ್ಮ ಸಂಸ್ಕೃತಿ. ನಿಮಗೆ ಉತ್ತರ ಕೊಡುವ ಆಗತ್ಯವಿಲ್ಲ. ಕೆಲಸಕ್ಕೆ ಬಾರದ ವಿಚಾರವನ್ನ ಯಾಕೆ ಮಾತನಾಡ್ತೀರಾ ? ಯಡಿಯೂರಪ್ಪ ರಾಜೀನಾಮೆ ಕೊಟ್ಟಾಗ, ಬಸವರಾಜ್ ಯತ್ನಾಳ್ ನನ್ನ ಉಚ್ಛಾಟನೆ ಮಾಡಿದಾಗ ಉತ್ತರ ಕೊಟ್ರಾ ? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಇದು ಪಕ್ಷದ ಆಂತರಿಕ ವಿಚಾರ ಎಂದು ಹೇಳಿ ಸದನದಿಂದ ನಿರ್ಗಮಿಸಿದರು.




