ಬೆಂಗಳೂರು: ವಿಧಾನಪರಿಷತ್ತಿನಲ್ಲಿ ಈ ವಿಚಾರ ಭಾರಿ ವಾಗ್ವಾದಕ್ಕೆ ಕಾರಣವಾಯಿತು.ಸದನ ಅರಂಭಗೊಂಡ ಕೂಡಲೇ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಸಹಕಾರ ಸಚಿವರಾಗಿದ್ದ ಕೆ. ಎನ್. ರಾಜಣ್ಣ ಅವರು ಸಚಿವ ಸ್ಥಾನದಿಂದ ವಜಾಗೊಂಡಿರುವ ಕುರಿತ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಸಹಿಯಿರುವ ಪತ್ರ ಓದಲು ಮುಂದಾದರು. ಇದಕ್ಕೆ ಆಡಳಿತ ಪಕ್ಷದ ಸಚೇತಕ ಸಲೀಂ ಆಕ್ಷೇಪ ವ್ಯಕ್ತಪಡಿಸಿದರು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಪ್ರಶೋತ್ತರ ಅವಧಿ ಮುಗಿದ ಬಳಿಕ ಮಾತನಾಡಿ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅವರು ಸೂಚಿಸಿದರು. ಇದು ತುರ್ತು ವಿಷಯವಾಗಿದ್ದು, ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಏಕೆ ವಜಾ ಮಾಡಿದರು ಎಂದು ಛಲವಾದಿ ನಾರಾಯಣ ಪ್ರಶ್ನಿಸಿದರು. ಇದಕ್ಕೆ ಬಿಜೆಪಿ ಸದಸ್ಯರಾದ ಸಿ. ಟಿ.ರವಿ ಸೇರಿದಂತೆ ಇನ್ನಿತರ ಸದಸ್ಯರು ಧ್ವನಿಗೂಡಿಸಿದರು.
ವಿಪಕ್ಷ ಸದಸ್ಯರ ಮಾತಿಗೆ ವಿರೋಧಿಸಿದ ಆಡಳಿತ ಪಕ್ಷದ ನಾಯಕರು, ರಾಜಣ್ಣ ಅವರ ಮೇಲೆ ಯಾವತ್ತಿನಿಂದ ಪ್ರೀತಿ ಬಂತು ಎಂದು ವ್ಯಂಗ್ಯವಾಡಿದರು. ಮಾತಿನ ಚಕಮಕಿ ಹೆಚ್ಚಾಗುತ್ತಿದ್ದಂತೆ 10 ನಿಮಿಷ ಕಲಾಪವನ್ನು ಸಭಾಪತಿ ಅವರು ಮುಂದೂಡಿದರು.
ಸದನ ಮತ್ತೆ ಆರಂಭವಾಗುತ್ತಿದ್ದಂತೆ ರಾಜಣ್ಣ ಅವರನ್ನು ವಜಾಗೊಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ವಜಾಗೊಳಿಸಲು ಕಾರಣವೇನು? ಭ್ರಷ್ಟಾಚಾರದಲ್ಲಿ ಅವರು ತೊಡಗಿಸಿಕೊಂಡಿದ್ದಾರೆಯೇ ಎಂದು ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದರು.
ಸಿಎಂರಿಂದ ಅಥವಾ ಸಭಾನಾಯಕರಿಂದ ಉತ್ತರ ಕೊಡಿಸಿ ಎಂದು ಪಟ್ಟು ಹಿಡಿದರು. ಸಭಾ ನಾಯಕರು ಸದನಕ್ಕೆ ಬಂದಿಲ್ಲ. ಬಂದ ಬಳಿಕ ಅವರಿಂದ ಉತ್ತರ ಕೊಡಿಸಲಾಗುವುದು ಎಂದು ಸಭಾಪತಿ ಭರವಸೆ ನೀಡಿದ್ದರಿಂದ ವಿಪಕ್ಷ ನಾಯಕರು ಸುಮ್ಮನಾದರು. ನಂತರ ಸಭಾಪತಿ ಪ್ರಶ್ನೋತ್ತರ ಕಲಾಪವನ್ನು ಕೈಗೆತ್ತಿಕೊಂಡರು.




