ಬೆಂಗಳೂರು: ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರ ರಾಜೀನಾಮೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸತ್ಯವಂತರಿಗಿದು ಕಾಲವಲ್ಲ ಎಂದು ಕಾಂಗ್ರೆಸ್ ಕಾಲೆಳೆದಿದ್ದಾರೆ. ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಸತ್ಯ ಹೇಳಿದ್ದಕ್ಕೆ, ಕಾಂಗ್ರೆಸ್ ಹೈಕಮಾಂಡ್ ಕೆ.ಎನ್. ರಾಜಣ್ಣ ಅವರಿಂದ ರಾಜೀನಾಮೆ ಪಡೆದಿದೆ ಎಂದು ಆರೋಪಿಸಿದ್ದಾರೆ.
- ಕಳ್ಳಾಟ ಇಲ್ಲದಿದ್ದರೆ ಮುಚ್ಚಿಡುವುದಕ್ಕೇನಿದೆ?
- ಮೊದಲ ಸಿನಿಮಾ ಚಿತ್ರ ಬಿಡುಗಡೆ ನೆನಪು ಮಾಡಿಕೊಂಡ ಅನಿರುದ್ಧ
- ಮಲೆನಾಡ ಶೈಲಿಯ ಬಿಸಿಬಿಸಿ ‘ನೀರುಪ್ಪಿಟ್ಟು’ ಮಾಡುವ ವಿಧಾನ
- ದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಅರ್ಜಿ ಆಹ್ವಾನ
- ಎಸ್ಐಆರ್ ರಾಜಕೀಯಕ್ಕೆ ಬಳಕೆ ಸರಿಯಲ್ಲ: ಡಿ ಕೆ ಶಿವಕುಮಾರ್
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ಮತಗಳ್ಳತನಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರ ಹಸಿ ಸುಳ್ಳುಗಳನ್ನು ಬಯಲು ಮಾಡಿದ್ದಕ್ಕೆ, ಹೈಕಮಾಂಡ್ ಆದೇಶದ ಮೇರೆಗೆ ಕೆ.ಎನ್. ರಾಜಣ್ಣ ಅವರ ರಾಜೀನಾಮೆ ಪಡೆಯಲಾಗಿದೆ. ಸತ್ಯ ಹೇಳಿದ್ದಕ್ಕೆ ಹಿರಿಯ ರಾಜಕಾರಣಿ ಬೆಲೆ ತೆತ್ತಿದ್ದಾರೆ ಎಂದರು.
ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ವಾಸ್ತವವನ್ನು ಎದುರಿಸುವ ಧೈರ್ಯವಿಲ್ಲ. ಸತ್ಯಗಳು ಬಹಳ ಸ್ಪಷ್ಟವಾಗಿದ್ದು, ರಾಹುಲ್ ಗಾಂಧಿ ಅವರ ಮತಗಳ್ಳತನ ಆರೋಪದಲ್ಲಿ ಯಾವುದೇ ಹರುಳಿಲ್ಲ. ಇದಕ್ಕೆ ಕೆ.ಎನ್. ರಾಜಣ್ಣ ಅವರು ನೀಡಿದ್ದ ಹೇಳಿಕೆಯೇ ಸಾಕ್ಷಿ. ಸತ್ಯವನ್ನು ಹೇಳಿದ್ದರಿಂದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಮತದಾರರ ಪಟ್ಟಿಯಲ್ಲಿ ದುಷ್ಕೃತ್ಯಗಳು ನಡೆದಿವೆ. ಆದ್ದರಿಂದ ಈಗ ಪ್ರತಿಕ್ರಿಯೆ ನೀಡುವುದು ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜವಾಬ್ದಾರಿಯಾಗಿದೆ. ನಾವು ಸದನದಲ್ಲಿಯೂ ಈ ವಿಚಾರವನ್ನು ಪ್ರಸ್ತಾಪಿಸುತ್ತೇವೆ ಎಂದರು.




