ಮಂಗಳೂರು: ಉಳ್ಳಾಲ ಸಮೀಪದ ಕೋಟೆಕಾರು ಬ್ಯಾಂಕ್ ನಲ್ಲಿ ನಡೆದ ಲೂಟಿಮಾಡಿದ ದರೋಡೆಕೋರರು ಕೇರಳ ಅಥವಾ ತಮಿಳುನಾಡಿನಲ್ಲಿ ಭೂಗತರಾಗಿರುವ ಸುಳಿವು ದೊರೆತು ಕಾರ್ಯಾಚರಣೆ ಕೈಗೊಂಡ ಬೆನ್ನಲ್ಲೇ ಉತ್ತರ ಭಾರತದತ್ತ ಪರಾರಿಯಾಗಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗಿದೆ.
ದರೋಡೆಕೋರರು ರೈಲಿನಲ್ಲಿ ಉತ್ತರ ಭಾರತದ ಕಡೆ ತೆರಳಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಬೆಂಗಳೂರಿನಿಂದ ವಿಮಾನದಲ್ಲಿ ಉತ್ತರ ಭಾರತದತ್ತ ಹೊರಟಿದ್ದಾರೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಆರೋಪಿಗಳು ಕದ್ದ ಚಿನ್ನವನ್ನು ಸಾಗಿಸಿದ್ದು ಫಿಯೆಟ್ ಕಾರಿನಲ್ಲಿ ಸಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ, ಆರೋಪಿಗಳು ಕದ್ದ ಚಿನ್ನವನ್ನು ಮತ್ತೊಂದು ಕಾರು ಚೆವ್ರೊಲೆಟ್ ನಲ್ಲಿ ಸಾಗಿಸಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು ಕಡೆ ಚೆವ್ರೊಲೆಟ್ ಕಾರಿನಲ್ಲಿ ಬಂದ ಮೂವರು ದರೋಡೆಕೋರರು ಬ್ಯಾಂಕ್ ದರೋಡೆ ಮಾಡಿ, ಮಂಗಳೂರಿನಲ್ಲಿ ಮೊಬೈಲ್ ಬಿಸಾಕಿ ಬಂಟ್ವಾಳ ಕಡೆ ತೆರಳಿರುವ ಶಂಕೆ ವ್ಯಕ್ತವಾಗಿದೆ. ಬಿ.ಸಿ.ರೋಡ್ ಟೋಲ್ ಹಾಗೂ ಸಿಸಿಟಿವಿ ತಪ್ಪಿಸಲು ಟೋಲ್ ಪಕ್ಕದ ರಸ್ತೆ ಮೂಲಕ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಬಳಿಕ ವಿಟ್ಲ ಮೂಲಕ ಕೇರಳ ಗಡಿ ತಲುಪಿ ಕೇರಳದ ಗ್ರಾಮೀಣ ಪ್ರದೇಶ ತಲುಪಿರುವ ಸಾದ್ಯತೆ ಇದೆ. ಎರಡು ದಿಕ್ಕಿನಲ್ಲಿ ಸಾಗಿದ ಕಾರುಗಳು ಕೆಲವೇ ಗಂಟೆಗಳಲ್ಲಿ ಕೇರಳದಲ್ಲೇ ಸಂದಿಸಿರುವ ಬಗ್ಗೆ ಪೊಲೀಸ್ ಮೂಲಗಳಿಂದ ಮಾಹಿತಿ ದೊರೆತಿದೆ. ಈ ನಿಟ್ಟಿನಲ್ಲಿ ಪೊಲೀಸರ ತಂಡ ಕೇರಳದಲ್ಲಿ ಬೀಡುಬಿಟ್ಟಿದೆ.
ದರೋಡೆಕೋರರ ಬಗ್ಗೆ ಲಭ್ಯವಾದ ಮಾಹಿತಿ ಆಧಾರದ ಮೇಲೆ ಮಂಗಳೂರು ಪೊಲೀಸರು ಇಬ್ಬರು ಸಂಶಯಾಸ್ಪದ ವ್ಯಕ್ತಿಗಳನ್ನು ಉಳ್ಳಾಲ ಪೊಲೀಸ್ ಠಾಣೆಗೆ ಕರೆಸಿ ತೀವ್ರ ವಿಚಾರಣೆ ನಡೆಸಿದ್ದಾರೆ. ಈ ಇಬ್ಬರು 2017ರ ದರೋಡೆ ಪ್ರಕರಣದ ಆರೋಪಿಗಳಾಗಿದ್ದರು. ಎಸಿಪಿ ಧನ್ಯಾ ನಾಯಕ್ ನೇತೃತ್ವದಲ್ಲಿ ಸಿಸಿಬಿ ಸೇರಿ ವಿವಿಧ ಠಾಣೆಗಳ ಪೊಲೀಸರ ಎಂಟು ತಂಡ ಪ್ರಕರಣದ ತನಿಖೆ ನಡೆಸುತ್ತಿವೆ.
ಉಳ್ಳಾಲ, ತೊಕ್ಕೊಟ್ಟು ಪ್ರದೇಶದಲ್ಲಿ ದರೋಡೆ ಕೃತ್ಯದಲ್ಲಿ ಭಾಗಿಯಾದವರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಜೊತೆಗೆ ಸಿಸಿಟಿವಿ ದಾಖಲೆ ಹಾಗೂ ಇತರೆ ತಾಂತ್ರಿಕ ಮಾಹಿತಿ ಆಧರಿಸಿ ತನಿಖೆ ನಡೆಸುತ್ತಿದ್ದಾರೆ. ಸದ್ಯ ಪೊಲೀಸರ ತಂಡಗಳು ಕೇರಳ, ತಮಿಳುನಾಡು, ಮುಂಬೈ, ಗೋವಾದಲ್ಲಿ ಬೀಡು ಬಿಟ್ಟಿವೆ.
ದರೋಡೆ ಬಳಿಕ ಎಚ್ಚೆತ್ತುಕೊಂಡ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ರಾಷ್ಟ್ರೀಕೃತ ಬ್ಯಾಂಕ್ ಗಳು, ಸಹಕಾರಿ ಬ್ಯಾಂಕ್ ಮುಖ್ಯಸ್ಥರ ಜೊತೆ ಸಭೆ ನಡೆಸಿದ್ದಾರೆ. ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ಮುಖ್ಯಸ್ಥರು, ಅಧಿಕಾರಿಗಳ ಜೊತೆ ಆಯಾ ಠಾಣಾಧಿಕಾರಿಗಳು ಸಭೆ ನಡೆಸಿದರು. ಬ್ಯಾಂಕ್ ಭದ್ರತೆ ಕುರಿತು ಸೂಕ್ತ ಕಾನೂನು ತಿಳಿವಳಿಕೆ ನೀಡಿದರು. ಎಲ್ಲ ಬ್ಯಾಂಕ್ ಗಳ ಭದ್ರತೆ ಖಾತ್ರಿಪಡಿಸುವಂತೆ ಸೂಚಿಸಿದರು.




