ಚಿಕ್ಕಮಗಳೂರು ಜಿಲ್ಲೆಯಲ್ಲಿ ದಲಿತ ಯುವಕನಿಗೆ ಪೊಲೀಸ್ ಇನ್ಸ್ಪೆಕ್ಟರ್ ಮೂತ್ರ ಕುಡಿಸಿದ್ದು ಅತ್ಯಂತ ಕ್ರೂರ ಹಾಗೂ ರಾಜ್ಯವೇ ತಲೆ ತಗ್ಗಿಸುವ ಘಟನೆ. ಇಂತಹ ಪ್ರಕರಣಗಳು ಬಿಜೆಪಿ ಆಳ್ವಿಕೆಯ ಯುಪಿ, ಮಧ್ಯಪ್ರದೇಶ, ಬಿಹಾರದಂತಹ ರಾಜ್ಯಗಳಿಂದ ಕೇಳಿಬರುತ್ತಿತ್ತು, ಈಗ ಕರ್ನಾಟಕದಲ್ಲೂ ಘಟಿಸಿದ್ದಕ್ಕೆ ದಲಿತ ವಿರೋಧಿ ಬಿಜೆಪಿಯೇ ಕಾರಣ ಎಂದು ಕೆಪಿಸಿಸಿ ಆರೋಪಿಸಿದೆ.
ಘಟನೆ ಕುರಿತು ಸರಣಿ ಟ್ವೀಟ್ ಮಾಡಿರುವ ಕೆಪಿಸಿಸಿ, ಇಂತಹ ಅಮಾನವೀಯ ಕೃತ್ಯವೆಸಗಿದ ಪೊಲೀಸ್ ಇನ್ಸ್ಪೆಕ್ಟರ್‌ನನ್ನು ಅಮಾನತುಗೊಳಿಸದೆ, ವಿರೋಧ ತಣಿಸಲು ಕೇವಲ ವರ್ಗಾವಣೆ ಮಾಡಿದ್ದು ಬಿಜೆಪಿಯ ದಲಿತ ವಿರೋಧಿ ನೀತಿಗೆ ಸಾಕ್ಷಿ. @BSBommai ಅವರೇ, ಕರ್ನಾಟಕಕ್ಕೆ ಈ ಯುಪಿ ಮಾಡೆಲ್ ಬೇಕಿಲ್ಲ. ಕೂಡಲೇ ಇನ್ಸ್ಪೆಕ್ಟರ್‌ನನ್ನು ಅಮನತುಗೊಳಿಸಿ ಉನ್ನತ ತನಿಖೆಗೆ ವಹಿಸಿ ಎಂದು ಆಗ್ರಹಿಸಿದೆ.
ಮನುವಾದಿ ಸಿದ್ಧಾಂತದ ಬಿಜೆಪಿ ದಲಿತ, ಹಿಂದುಳಿದ ವರ್ಗಗಳನ್ನು ಮತ್ತೊಮ್ಮೆ ಶೋಷಣೆಯ ವಾತಾವರಣಕ್ಕೆ ಕೊಂಡೊಯ್ಯುತ್ತಿದೆ. ಬಿಜೆಪಿ ಶಾಸಕನಿಂದ ಹಲ್ಲೆಗೊಳಪಟ್ಟ ದಲಿತ ಮಹಿಳೆ ಚಾಂದಿನಿ ನಾಯಕ್ ಅವರಿಗೆ ನ್ಯಾಯ ಸಿಗಲಿಲ್ಲ, ಶಾಸಕನ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ. ಇದು ಬಿಜೆಪಿಯ ದಲಿತ ಹಾಗೂ ಮಹಿಳಾ ವಿರೋಧಿ ನೀತಿಗೆ ಸಾಕ್ಷಿ ಎಂದಿದೆ.
ಮೂತ್ರ ಕುಡಿಸಿದ ಪ್ರಕರಣ: ಅಮಾನವೀಯ ಘಟನೆ ಎಂದ ರೇವತಿ ರಾಜ್
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ತಾಲೂಕ್ಕಿನ ಗೋಣಿಬೀಡಿನಲ್ಲಿ ದಲಿತ ಯುವಕನಿಗೆ ಮೂತ್ರ ಕುಡಿಸಿದ ಘಟನೆಯನ್ನು ಕುರಿತು ಭೀಮಪುತ್ರಿ ರೇವತಿ ರಾಜ್ ಅವರು ಮಾಡಿರುವ ಮನವಿ.
ಈ ಘಟನೆ ಕುರಿತು ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಇದೀಗ ಪೊಲೀಸರು ಪ್ರಕರಣ ಸಂಬಂಧ FIR ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ವಿಪಕ್ಷಗಳ ಒತ್ತಡದಿಂದಾಗಿ ಇದು ಸಾಧ್ಯವಾಗಿದೆ.



