ಬೆಂಗಳೂರು: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಭ್ರಷ್ಟಚಾರದ ವಿರುದ್ಧ ಕರೆ ನೀಡಲಾಗಿದ್ದ ರಾಜ್ಯ ಬಂದ್ ಅನ್ನು ಕಾಂಗ್ರೆಸ್ ವಾಪಸ್ ಪಡೆದಿದೆ.
ನಾಳೆ ಪಿಯುಸಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿ ಹಾಗೂ ಪೋಷಕರು ತಮಗೆ ತೊಂದರೆಯಾಗಲಿದೆ ಎಂದು ತಿಳಿಸಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಪರಮೇಶ್ವರ್, ಎಂ.ಬಿ ಪಾಟೀಲ್ ಸೇರಿದಂತೆ ಪ್ರಮುಖ ನಾಯಕರೆಲ್ಲರೂ ಪಕ್ಷದ ಸ್ಕ್ರೀನಿಂಗ್ ಸಮಿತಿ ಸಭೆಯಲ್ಲಿ ಚರ್ಚೆ ಮಾಡಿ ಬಂದ್ ಹಿಂಪಡೆಯಲು ತೀರ್ಮಾನಿಸಿದ್ದಾರೆ.
ನಾಳೆ ಯಾವುದೇ ರೀತಿಯ ಬಂದ್ ಇರುವುದಿಲ್ಲ. ಶಾಲಾ ಕಾಲೇಜು ಮಕ್ಕಳ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸದ್ಯ ಬಂದ್ ಹಿಂಪಡೆಯಲಾಗಿದ್ದು, ಸ್ಕ್ರೀನಿಂಗ್ ಕಮಿಟಿ ಸಭೆ ನಂತರ ಈ ಹೋರಾಟದ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.




