ಬೆಂಗಳೂರು: ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಜೈನ್ ಕಾಲೇಜಿನ ವಿದ್ಯಾರ್ಥಿಗಳಿಗೆ ತನ್ನ ಪಟಾಲಂ ಮೂಲಕ ಸೂಚನೆ ನೀಡಿರುವ @Tejasvi_Surya ವಿರುದ್ಧ @ceo_karnataka ಅವರು ಕೂಡಲೇ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಕೆಪಿಸಿಸಿ ಒತ್ತಾಯಿಸಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಬೆಂಗಳೂರು ದಕ್ಷಿಣ ಲೋಕಸಭೆ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ವೇಳೆ ಕಾಲೇಜಿನ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಜರಿರಬೇಕು ಎಂದು ವಾಟ್ಸಪ್ ಮೂಲಕ ಸಂದೇಶ ಕಳಿಸಲಾಗಿತ್ತು. ಇದಕ್ಕೆ ಸಂಬಂಧಿಸಿದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಕೆಪಿಸಿಸಿ, ವಿದ್ಯಾರ್ಥಿಗಳನ್ನು ರಾಜಕೀಯ ಚಟುವಟಿಕೆಗಳಿಗೆ ಭಾಗವಹಿಸುವಂತೆ ಬೆದರಿಕೆ ಹಾಕುತ್ತಿರುವುದು ಚುನಾವಣಾ ನಿಯಮಗಳಿಗೆ ಹಾಗೂ ಕಾನೂನಿಗೆ ವಿರುದ್ಧವಾಗಿದೆ ಎಂದಿದೆ.

ಟಿ ಶರ್ಟ್ ಹಂಚಿಕೆಯ ವಿರುದ್ಧವೂ ಕ್ರಮ ಜರುಗಿಸಿ ಪಾರದರ್ಶಕ ಚುನಾವಣೆಗೆ ಪಕ್ಷಪಾತವಿಲ್ಲದ ಕ್ರಮಗಳನ್ನು ಕೈಗೊಳ್ಳಬೇಕು. ಈ ಹಿಂದೆ ನೀತಿ ಸಂಹಿತೆಗೆ ವಿರುದ್ಧವಾಗಿ ನಗರತ್ ಪೇಟೆಯಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿದ್ದ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗ ಯಾವುದೇ ಕಠಿಣ ಕ್ರಮ ಜರುಗಿಸದಿರುವುದು ಜನರಲ್ಲಿ ಆಯೋಗದ ಕಾರ್ಯಕ್ಷಮತೆಯ ಬಗ್ಗೆ ಅನುಮಾನ ಮೂಡಲು ಕಾರಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.







