ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!

4 hours ago

ಸಾರ್ವಜನಿಕರ ಗಮನಕ್ಕೆ | ನಕಲಿ ಫೇಸ್ಬುಕ್ ಖಾತೆಯ ಕುರಿತು ಎಚ್ಚರಿಕೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಅವರ ಭಾವಚಿತ್ರ ಬಳಸಿ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಪೋಸ್ಟ್ ಮಾಡಿರುವ ಬಿ ಕೆ ಹರಿಪ್ರಸಾದ್, ನನ್ನ ಹೆಸರು ಹಾಗೂ ಭಾವಚಿತ್ರವನ್ನು ದುರ್ಬಳಕೆ ಮಾಡಿಕೊಂಡು ಕಿಡಿಗೇಡಿಗಳು ಫೇಸ್ಬುಕ್ನಲ್ಲಿ ನಕಲಿ ಖಾತೆ ಸೃಷ್ಟಿಸಿ, ನನ್ನ ಹೆಸರಿನಲ್ಲಿ ಸಾರ್ವಜನಿಕರಿಗೆ ಸಂದೇಶಗಳನ್ನು ಕಳುಹಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ ಎಂದಿದ್ದಾರೆ.

ಈ ನಕಲಿ ಖಾತೆಯ ಮೂಲಕ ಕೆಲವರ ಮೊಬೈಲ್ ಸಂಖ್ಯೆಗಳು ಹಾಗೂ ವೈಯಕ್ತಿಕ ಮಾಹಿತಿಯನ್ನು ಕೇಳುತ್ತಿರುವುದು ತಿಳಿದುಬಂದಿದೆ. ನನ್ನ ಹೆಸರಿನಲ್ಲಿ ಬರುವ ಇಂತಹ ಯಾವುದೇ ಸಂದೇಶಗಳನ್ನು ನಂಬಬೇಡಿ. ಯಾರೊಂದಿಗೂ ವೈಯಕ್ತಿಕ ಮಾಹಿತಿ ಹಂಚಿಕೊಳ್ಳಬೇಡಿ. ಯಾವುದೇ ಹಣಕಾಸಿನ ವ್ಯವಹಾರ ನಡೆಸಬೇಡಿ ಎಂದಿದ್ದಾರೆ.

ನನ್ನ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಸಾರ್ವಜನಿಕರನ್ನು ವಂಚಿಸಲು ಯತ್ನಿಸುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಹಾಗೂ ನನ್ನ ಸ್ನೇಹಿತರು, ಹಿತೈಷಿಗಳು ಇಂತಹ ನಕಲಿ ಖಾತೆಗಳಿಂದ ಎಚ್ಚರಿಕೆಯಿಂದಿರಬೇಕು. ಈ ಖಾತೆಯನ್ನು ಫೇಸ್ಬುಕ್ಗೆ ವರದಿ (Report) ಮಾಡುವಂತೆ ಮನವಿ ಮಾಡಿದ್ದಾರೆ.

Leave a Reply