ಬೆಂಗಳೂರು: ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರದ ಬಿಜೆಪಿ ಸರಕಾರದ ವಿರುದ್ಧ ಪ್ರದೇಶ ಮಹಿಳಾ ಕಾಂಗ್ರೆಸ್ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್, ಮಾಜಿ ಸಚಿವ ಕೃಷ್ಣಬೈರೇಗೌಡ, ಶಾಸಕಿ ಸೌಮ್ಯರೆಡ್ಡಿ ಮತ್ತಿತರರು ಭಾಗವಹಿಸಿದರು.




