ಬೆಂಗಳೂರು: ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನಕ್ಕೆ ದಿನಗಣನೆ ಆರಂಭಗೊಂಡಿರುವ ಬೆನಲ್ಲೇ ಬಿಜೆಪಿಯಲ್ಲಿನ ಭಿನ್ನಮತ ಬಹಿರಂಗಗೊಂಡಿದ್ದು, ವಿಶ್ವಕರ್ಮ ಸಮುದಾಯದ ಹಿರಿಯ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಅವರು ಇದೀಗ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಅಷ್ಟೇ ಅಲ್ಲ ಹುಬ್ಬಳ್ಳಿಗೆ ತೆರಳಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.
ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ ನಂತರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನನ್ನನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಜವಾಬ್ದಾರಿ, ಸ್ಥಾನ ನೀಡಲಿಲ್ಲ. ಸಂಪೂರ್ಣವಾಗಿ ನಿರ್ಲಕ್ಷಿಸಿತು. ಇದರಿಂದ ಬೇಸರವಾಗಿ ಎಂ.ಎಲ್.ಸಿ ಸ್ಥಾನಕ್ಕೆ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ ಎಂದರು.
ಕಳೆದ ಲೋಕಸಭೆ ಚುನಾವಣೆ ಸಮಯದಲ್ಲಿ ಕೆಪಿ ನಂಜುಂಡಿ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ ಸೇರ್ಪಡೆಯಾಗಿದ್ದರು. ಆನಂತರ ಅವರನ್ನು ಬಿಜೆಪಿ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿತ್ತು. ಇದೀಗ ಮತ್ತೆ ಲೋಕಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ ತೊರೆದಿರುವ ಅವರು ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.




