ಕೆಪಿಎಸ್ಸಿ ನಡೆಸುತ್ತಿರುವ ಪ್ರತಿಯೊಂದು ಪರೀಕ್ಷೆಗಳಲ್ಲಿಯೂ ಗೊಂದಲಗಳು, ಲೋಪಗಳು, ಭಾಷಾಂತರ ದೋಷಗಳು ಬಯಲಾಗುತ್ತಲೇ ಇವೆ. ಈ ಹಿಂದಿನ ಪರೀಕ್ಷೆಯಲ್ಲೂ ಕನ್ನಡ ಭಾಷಾ ಪರೀಕ್ಷಾರ್ಥಿಗಳ ಪ್ರಶ್ನೆ ಪತ್ರಿಕೆಗಳನ್ನು ಸಮರ್ಪಕವಾಗಿ ಭಾಷಾಂತರಿಸದೇ ಯಡವಟ್ಟು ಮಾಡಿ ಲಕ್ಷಾಂತರ ಪರೀಕ್ಷಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
ಕರ್ನಾಟಕದ ಮಾತೃಭಾಷೆಯಲ್ಲಿಯೇ ಸೂಕ್ತ ಪ್ರಶ್ನೆಗಳನ್ನು ನೀಡುವಲ್ಲಿ ಸಂಪೂರ್ಣ ವಿಫಲವಾಗಿ ಪದೇ ಪದೇ ಕೆಎಎಸ್ ಪರೀಕ್ಷಾರ್ಥಿಗಳನ್ನು ಗೊಂದಲಕ್ಕೆ ದೂಡುತ್ತಿರುವ ಬೇಜವಾಬ್ದಾರಿತನ ಪದೇ ಪದೇ ಮರುಕಳಿಸುತ್ತಿರುವುದು ಕೆಪಿಎಸ್‌ಸಿ ವೈಫಲ್ಯ ಹಾಗೂ ರಾಜ್ಯ ಸರ್ಕಾರದ ಅಸಮರ್ಥ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ.
ಇದೀಗ ಪೂರ್ವಬಾವಿ ಪರೀಕ್ಷೆಯಲ್ಲಿನ ಮರು ಪರೀಕ್ಷೆಯ 2 ಪತ್ರಿಕೆಗಳಲ್ಲಿ 79 ದೋಷಗಳಿದ್ದರೂ ಕೆಪಿಎಸ್ ಸಿ ಕೇವಲ 5 ಪ್ರಶ್ನೆಗಳಿಗೆ ಮಾತ್ರ ಕೃಪಾಂಕ ನೀಡುವ ಮೂಲಕ ಕನ್ನಡ ಮಾಧ್ಯಮದ ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಿದೆ. ಕೆಪಿಎಸ್ ಸಿಯ ನಿರಂತರ ಯಡವಟ್ಟುಗಳನ್ನು ಸಹಿಸದೇ ಈ ಭ್ರಷ್ಟ ಹಾಗೂ ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರದ ಮೇಲೆ ಕಿಂಚಿತ್ತೂ ನಂಬಿಕೆಯಿಲ್ಲದೆ ಪರೀಕ್ಷಾರ್ಥಿಗಳು ನ್ಯಾಯಾಲಯದ ಮೊರೆ ಹೋಗಿರುವುದು ಈ ಸರ್ಕಾರದ ಅಸಡ್ಡೆತನವನ್ನು ಸಾಕ್ಷೀಕರಿಸುತ್ತಿದೆ.
ಇನ್ನಾದರೂ ಕಠಿಣ ಪರಿಶ್ರಮದಿಂದ ಉದ್ಯೋಗವನ್ನು ಅರಸಿ ಪರೀಕ್ಷೆಗಳನ್ನು ಬರೆಯುವ ಸಾವಿರಾರು ಉದ್ಯೋಗಾಕಾಂಕ್ಷಿಗಳ ಗೊಂದಲ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ವಹಿಸಲಿ. ಅಲ್ಲದೇ ಕೆಪಿಎಸ್ಸಿ ಎಡವಟ್ಟುಗಳಿಗೆ ಸಂಪೂರ್ಣ ಕಡಿವಾಣ ಹಾಕಿ ನೇಮಕಾತಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸುವೆ.
– ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ




