ಕೆಪಿಎಸ್ಸಿ ಹಗರಣ: ರಂಗ ಪ್ರವೇಶಿಸಿದ ಇಡಿ

2 hours ago

ಬೆಂಗಳೂರು: ಕೆಪಿಎಸ್ಸಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಆಯೋಗದ ಸದಸ್ಯೆ ಬಿ.ವಿ.ಗೀತಾ ಶಿವಮೂರ್ತಿ, ಮಾಜಿ ಪರೀಕ್ಷಾ ನಿಯಂತ್ರಕ ಹಾಗೂ ಐಎಎಸ್ ಅಧಿಕಾರಿ ಘ್ಯಾನೇಂದ್ರ ಕುಮಾರ್ ಗಂಗ್ವಾರ್ ಮತ್ತು ಬಸವರಾಜ ಕನ್ನಾಳೆ ವಿರುದ್ಧ ಜಾರಿ ನಿರ್ದೇಶನಾಲಯದ (ಇ.ಡಿ.) ಬೆಂಗಳೂರು ವಲಯ ಕಚೇರಿ ಪ್ರಾಸಿಕ್ಯೂಷನ್ ದೂರನ್ನು ದಾಖಲಿಸಿದೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ), 2002ರ ಸೆಕ್ಷನ್ 44 ಮತ್ತು 45ರ ಅಡಿಯಲ್ಲಿ ಬೆಂಗಳೂರಿನ ಪಿಎಂಎಲ್ಎ ಪ್ರಕರಣಗಳ ವಿಶೇಷ ನ್ಯಾಯಾಲಯದಲ್ಲಿ ಈ ದೂರು ಸಲ್ಲಿಸಲಾಗಿದೆ.

ಆರೋಪಿಗಳ ವಿರುದ್ಧ ಪಿಎಂಎಲ್ಎ ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ಹಣ ಅಕ್ರಮ ವರ್ಗಾವಣೆ ಅಪರಾಧದ ಆರೋಪ ಹೊರಿಸಲಾಗಿದ್ದು, ಸೆಕ್ಷನ್ 4ರ ಅಡಿಯಲ್ಲಿ ಶಿಕ್ಷೆಗೆ ಅವಕಾಶವಿದೆ. ಕರ್ನಾಟಕ ಸರ್ಕಾರದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ 2026ರ ಜನವರಿ 9ರಂದು ನಡೆದ ಪರೀಕ್ಷೆಯಲ್ಲಿನ ಅಕ್ರಮಗಳ ಆರೋಪದ ಮೇಲೆ ವಿಶೇಷ ತನಿಖಾ ತಂಡ (ಎಸ್ಐಟಿ) ವಿಚಾರಣೆ ನಡೆಸುತ್ತಿದೆ.

Leave a Reply