ಬೆಂಗಳೂರು: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ, ಪೊಲೀಸರು ಮತ್ತೆ ಮೂವರು ಪೊಲೀಸರ ಬಲೆಗೆ ಬಿದ್ದಿದ್ದಾರೆ ಇದರೊಂದಿಗೆ ಅಕ್ರಮದಲ್ಲಿ ಶಾಮೀಲಾಗಿ ಬಂಧಿತರಾದವರ ಸಂಖ್ಯೆ 48ಕ್ಕೆ ಏರಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಮಲ್ಲಾಪುರ ಪಿ.ಜಿ. ಗ್ರಾಮದ ಅಣ್ಣಪ್ಪ ಕೆಂಪಣ್ಣ ಮಾರವಾಡಿ(31), ಶಿವಾಪುರದ ಜಾನ್ರಾಬರ್ಟ್ ಯಶವಂತ ಬಂಗೆನ್ನವರ(26), ಮೂಡಲಗಿ ತಾಲ್ಲೂಕಿನ ರಾಜಾಪುರದ ಚಿದಾನಂದ ಚಿನ್ನಪ್ಪ ಮಾಡಲಗಿ(27) ಬಂಧಿತರಾಗಿದ್ದಾರೆ.
ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ ಡಿವೈಸ್ ಮತ್ತು ಮೈಕ್ರೋಚಿಪ್ ಬಳಸಿ, ಮೂವರು ಆರೋಪಿಗಳು ಪರೀಕ್ಷೆ ಬರೆದಿದ್ದರು. ಅವರಿಂದ ಅಕ್ರಮಕ್ಕೆ ಬಳಸಿದ ಎಲ್ಲ ಸಾಮಗ್ರಿಗಳ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
