ರಾಜ್ಯದ ಬರ ಪರಿಸ್ಥಿತಿ ವಿವರಿಸಿ ಶೀಘ್ರ ಅಗತ್ಯವಿರುವ ಅನುದಾನ ಬಿಡುಗಡೆಗೆ ಕೃಷ್ಣ ಭೈರೇಗೌಡ ಮನವಿ

2 years ago

#KrishnaBairegowda #appeals #release #urgently #needed #grants #explaining #drought #situation #state

ದೆಹಲಿ: ನವದೆಹಲಿಯಲ್ಲಿ ಕೇಂದ್ರ ಕೃಷಿ ಇಲಾಖೆ ಹಾಗೂ ಗೃಹ ಇಲಾಖೆಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ರಾಜ್ಯದ ಬರ ಪರಿಸ್ಥಿತಿಯನ್ನು ವಿವರಿಸಿ ಶೀಘ್ರದಲ್ಲಿಯೇ ಅಗತ್ಯವಿರುವ ಅನುದಾನ ಬಿಡುಗಡೆ ಮಾಡಬೇಕು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಮನವಿ ಸಲ್ಲಿಸಿದರು.

ಇದೇ ವೇಳೆ ರಾಜ್ಯದಲ್ಲಿ ಈ ಬಾರಿ ಬರಗಾಲದಿಂದ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ ಬರಪೀಡಿತ ತಾಲೂಕುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಜ್ಯದ ಜನತೆಯ ಒಳಿತಿಗಾಗಿ ಕೇಂದ್ರದ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ರಾಜ್ಯಕ್ಕೆ ನೆರವು ಒದಗಿಸುವಂತೆ ಕೋರಿದರು.

ಈ ಸಂದರ್ಭದಲ್ಲಿ ಕೃಷಿ ಸಚಿವ  N Chaluvarayaswamy chalurayaswamy ಹಾಗೂ ಗ್ರಾಮೀಣ ಅಭಿವೃದ್ಧಿ ಸಚಿವ PriyankKharge ಉಪಸ್ಥಿತರಿದ್ದರು.

Leave a Reply