ಬಗರ್ ಹುಕುಂ ದುರುಯೋಗ ಕುರಿತು ಕೃಷ್ಣ ಬೈರೇಗೌಡ ವಿಷಾಧ

2 years ago

ಬೆಂಗಳೂರು: ಬಡವರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಜಾರಿಗೆ ತಂದಿರುವ ಬಗರ್ ಹುಕುಂ ಯೋಜನೆಯನ್ನು ಅನೇಕರು ಉದ್ದೇಶಪೂರ್ವಕವಾಗಿ ದುರುಪಯೋಗಗೊಳಿಸುತ್ತಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ವಿಷಾದ ವ್ಯಕ್ತಪಡಿಸಿದರು.

ಸದನದಲ್ಲಿ ಮಾತಾಡಿದ ಅವರು, ಕೆಲವರು ಬಗರ್ ಹುಕುಂ ಜಮೀನು ಮಂಜೂರಾತಿಗೆ 25ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಕಾನೂನಿನ ಪ್ರಕಾರ ಅರ್ಜಿದಾರರಿಗೆ 2005ಕ್ಕೆ ಕನಿಷ್ಠ 18 ವರ್ಷವಾಗಿರಬೇಕು. ಆದರೆ, ಈಗ 18 ವರ್ಷವಾದವರೂ ಅರ್ಜಿ ಸಲ್ಲಿಸಿದ್ದಾರೆ. ನಮೂನೆ 57ರ ಅಡಿಯಲ್ಲಿ ಒಟ್ಟಾರೆ 9,85,000 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಎಲ್ಲರಿಗೂ ಜಮೀನು ಮಂಜೂರು ಮಾಡಬೇಕೆಂದರೆ 54 ಲಕ್ಷ ಎಕರೆ ಜಮೀನಿನ ಅಗತ್ಯವಿದೆ. ಆದರೆ, ರಾಜ್ಯದಲ್ಲಿ ಸರ್ಕಾರಿ ಜಮೀನೆ ಅಷ್ಟಿಲ್ಲ ಎಂದರು.

ಅನರ್ಹರಿಗೆ ಭೂ ಮಂಜೂರುಗೊಳಿಸಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಹೀಗಾಗಿ ಅನೇಕರ ಅರ್ಜಿಗಳು ಅನರ್ಹಗೊಂಡಿವೆ. ಆದರೆ, ಅರ್ಜಿಗಳನ್ನು ತಿರಸ್ಕೃತಗೊಳಿಸುವ ಸಂದರ್ಭದಲ್ಲಿ ನಿಯಮಗಳನ್ನು ತಪ್ಪಾಗಿ ಅರ್ಥೈಸಿದ್ದರೆ ಖಂಡಿತವಾಗಿ ಪುನರ್ ಪರಿಶೀಲನೆಗೆ ಒಳಪಡಿಸಲಾಗುವುದು ಎಂದರು.

Leave a Reply