ಕೃಷ್ಣ ಬೈರೇಗೌಡ ಜವಾಬ್ದಾರಿಯಿಂದ ಈ-ಖಾತಾ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದಾರೆ: ಡಿ.ಕೆ. ಶಿವಕುಮಾರ್

1 year ago

ಬೆಂಗಳೂರು: ಇ-ಖಾತಾ ನನ್ನ ಕನಸಿನ ಯೋಜನೆ. ಸಚಿವ ಕೃಷ್ಣ ಬೈರೇಗೌಡ ಅವರು ಸಚಿವರಾಗಿ ಸಾಕಷ್ಟು ಜವಾಬ್ದಾರಿಯಿಂದ ಈ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶಂಶಿಸಿದರು.

ಭಾನುವಾರ ಸಹಕಾರ ನಗರ ಮೈದಾನದಲ್ಲಿ ಆಯೋಜಿಸಲಾಗಿದ್ದ ಇ-ಖಾತಾ ಅಭಿಯಾನದಲ್ಲಿ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡ ಅವರು ಬೆಂಗಳೂರನ್ನು ನಿರ್ಮಿಸಿದರು. ಕೆಂಗಲ್ ಹನುಮಂತಯ್ಯನವರು ಹೆಮ್ಮೆಯ ವಿಧಾನಸೌಧ ನಿರ್ಮಿಸಿದರು. ಎಸ್ ಎಂ ಕೃಷ್ಣ ಅವರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣದ ಜೊತೆಗೆ ಐಟಿ-ಬಿಟಿ ಕ್ಷೇತ್ರಗಳಿಗೆ ಅಂಕಿತ ಹಾಕಿದರು ಎಂದರು.

ಇದೇ ರೀತಿ ಇ-ಖಾತಾ ಮೂಲಕ ಸಾರ್ವಜನಿಕರ ಆಸ್ತಿ ಮಾಲೀಕತ್ವಕ್ಕೆ ಗ್ಯಾರಂಟಿ ನೀಡಿದ ಕೃಷ್ಣ ಬೈರೇಗೌಡ ಎಂದು ಇತಿಹಾಸ ಸ್ಮರಿಸಲಿದೆ. ಇಂತಹ ನಾಯಕರನ್ನು ಕ್ಷೇತ್ರದ ಜನ ಮುಂದಿನ ಚುನಾವಣೆಯಲ್ಲಿ 1 ಲಕ್ಷಕ್ಕೂ ಅಧಿಕ ಮತದಿಂದ ಗೆಲ್ಲಿಸಬೇಕು ಎಂದು ಅಭಿಪ್ರಾಯಪಟ್ಟರು.

Leave a Reply