ಶಾಸಕ ಎಸ್.ಸುರೇಶ್ ಕುಮಾರ್ ನೇತೃತ್ವದಲ್ಲಿ ಜನರೊಂದಿಗೆ ಜನಸೇವಕ, ಸಾರ್ವಜನಿಕರ ಸಮಸ್ಯೆಗಳಿಗೆ ನೇರ ಭೇಟಿ, ಪೋನ್ ಇನ್ ಕಾರ್ಯಕ್ರಮ
ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರ ಜನಸಂಪರ್ಕ ಕಛೇರಿ ಮುಂಭಾಗದಲ್ಲಿ ಜನರೊಂದಿಗೆ ಜನಸೇವಕ ಜನಸ್ಪಂದನಾ ಕಾರ್ಯಕ್ರಮ ನಡೆಯಿತು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸಾರ್ವಜನಿಕರ ಕುಂದೂಕೂರತೆಗಳನ್ನು ಶಾಸಕ ಎಸ್.ಸುರೇಶ್ ಕುಮಾರ್ ಆಲಿಸಿ, ಪರಿಹಾರಕ್ಕೆ ಕ್ರಮ ಕೈಗೊಂಡರು.
ಇದೇ ಸಂದರ್ಭದಲ್ಲಿ ಮಾತನಾಡಿದ ಎಸ್.ಸುರೇಶ್ ಕುಮಾರ್, ಪ್ರತಿ ಸೋಮವಾರ ಜನರೊಂದಿಗೆ ಜನಸೇವಕ ಕಾರ್ಯಕ್ರಮ ಹಮ್ಮಿಕೊಂಡು ಬರಲಾಗುತ್ತಿದೆ. ಈ ಕಾರ್ಯಕ್ರಮದಿಂದ ಸಾರ್ವಜನಿಕರಿಗೆ ತತಕ್ಷಣ ಪರಿಹಾರ ಸಿಗುತ್ತಿದೆ ಮತ್ತು ಹಿರಿಯ ನಾಗರಿಕರು, ಉದ್ಯೋಗಿಗಳು ಜನಸ್ಪಂದನಾ ಕಾರ್ಯಕ್ರಮ ಬರಲು ಆಗುವುದಿಲ್ಲ. ಅದ್ದರಿಂದ ಈ ಬಾರಿಯಿಂದ ಐದು ಮೊಬೈಲ್ ಸಂಖ್ಯೆಗಳನ್ನು ಜನರಿಗೆ ನೀಡಿದ್ದು, ಮೊಬೈಲ್ ಕರೆ ಮಾಡುವ ಮೂಲಕ ಸಮಸ್ಯೆಗಳನ್ನು ಕೇಳುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದರು.
ಕೆ.ಆರ್.ಎಸ್. ಪಕ್ಷದ ಮುಖಂಡರು, ಕಾರ್ಯಕರ್ತರು ಆಗಮಿಸಿ ವಾರ್ಡ್ 108ರಲ್ಲಿ ಹಲವಾರು ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಪ್ರತಿ ಸಮಸ್ಯೆಗಳಿಗೂ ನಾನು ಖುದ್ದು ಭೇಟಿ ನೀಡಿ ಪರಿಹರಿಸಲಾಗುವುದು. ಜನರೊಂದಿಗೆ ಜನಸೇವಕ ಕಾರ್ಯಕ್ರಮದಿಂದ ಜನರ ಸಮಸ್ಯೆಗಳು ತತಕ್ಷಣ ಪರಿಹಾರ ಸಿಗುತ್ತಿದೆ. ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ ಎಂದರು.
ಮಂಡಲ ಬಿಜೆಪಿ ಅಧ್ಯಕ್ಷ ಸುದರ್ಶನ್, ಮಾಜಿ ಉಪ ಮೇಯರ್ ರಂಗಣ್ಣ, ಪಾಲಿಕೆ ಮಾಜಿ ಸದಸ್ಯರುಗಳಾದ ಹೆಚ್.ಆರ್.ಕೃಷ್ಣಪ್ಪ, ದೀಪಾ ನಾಗೇಶ್, ಪ್ರತಿಮಾ ಮತ್ತು ಬಿಬಿಎಂಪಿ, ಪೊಲೀಸ್ ಇಲಾಖೆ, ಬೆಸ್ಕಾಂ, ಜನಮಂಡಳಿ ಅಧಿಕಾರಿಗಳು ಹಾಜರಿದ್ದರು.









