ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ 2025-26ರ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಿದೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಪದವಿ ಕೋರ್ಸುಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್.ಡಬ್ಲ್ಯೂ., ಬಿ.ಎಸ್ಸಿ., ಬಿ.ಲಿಬ್.ಐ. ಎಸ್ಸಿ. ಮತ್ತು ಸ್ನಾತಕೋತ್ತರ ಕೋರ್ಸುಗಳಾದ ಎಂ.ಎ., ಎಂ.ಕಾಂ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ., ಎಂ.ಎಸ್ಸಿ., ಎಂ.ಲಿಬ್.ಐ. ಎಸ್ಸಿ. ಹಾಗೂ ಯುಜಿ/ಪಿಜಿ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳಿಗೆ ಜನವರಿ 09 ರಿಂದ ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಬಾಪೂಜಿನಗರ ಇಲ್ಲಿ ಆನ್ ಲೈನ್ ಮೂಲಕ ಪ್ರವೇಶಾತಿಗೆ ಚಾಲನೆ ನೀಡಲಾಗಿದೆ.
ಆಸಕ್ತರು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟ್ www.ksoumysuru.ac.in ನ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು
ಆಸಕ್ತ ಅರ್ಹ ವಿದ್ಯಾರ್ಥಿಗಳು online ನಲ್ಲಿ ಅರ್ಜಿ ಸಲ್ಲಿಸಿ ನಂತರ ಅಗತ್ಯ ದಾಖಲಾತಿಗಳೊಂದಿಗೆ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿ ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಕೆ.ಎಸ್.ಆರ್.ಟಿ.ಸಿ. ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ಕಛೇರಿ ದೂರವಾಣಿ ಸಂಖ್ಯೆ: 080-26603664 ಹಾಗೂ 98805-26439/90195-26439 ಅನ್ನು ಸಂಪರ್ಕಿಸಬಹುದು.




