ಬೆಳಗಾವಿ/ಬೆಂಗಳೂರು: ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಮಹಾರಾಷ್ಟ್ರಕ್ಕೆ ತೆರಳುವ ಬಸ್ಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.
ಬೆಂಗಳೂರಿನಿಂದ ಹೊರಡಬೇಕಿದ್ದ ಶಿರಡಿ, ಮುಂಬೈ, ಪುಣೆ ಬಸ್ಗಳನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರು ಗಮನಿಸಬೇಕು ಎಂದು ಸಾರಿಗೆ ಸಂಸ್ಥೆ ಮನವಿ ಮಾಡಿದೆ.
ಮಹಾರಾಷ್ಟ್ರದ ಭಾಗಗಳಿಗೆ ತೆರಳಲು ಮುಂಗಡ ಆಸನ ಕಾಯ್ದಿರಿಸಿರುವ ಪ್ರಯಾಣಿಕರು, ಬಸ್ ನಿಲ್ದಾಣಕ್ಕೆ ಬಾರದೆ ಇದ್ದರೆ ಹೆಚ್ಚಿನ ಮಾಹಿತಿಗೆ ಕೆಎಸ್ಆರ್ಟಿಸಿ ಸಹಾಯವಾಣಿಯನ್ನು ಸಂಪರ್ಕ ಮಾಡುವಂತೆ ಮನವಿ ಮಾಡಿದೆ.




