ಬೆಂಗಳೂರು: ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ನ (ಕೆಟಿವಿಎ) ಗೃಹ ಪತ್ರಿಕೆ ‘ಟಿವಿ – ಠೀವಿ – ಕಿರುತೆರೆಯ ಅಂತರಾಳದ ಮಹಾಧ್ವನಿ’ಯನ್ನು ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕರಾದ ಎನ್.ಆರ್. ರಮೇಶ್ ಅವರು ಪುನರಾರಂಭಗೊಳಿಸಿದರು.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಈ ಸಂದರ್ಭದಲ್ಲಿ ಕೆಟಿವಿಎ ಅಧ್ಯಕ್ಷ ಗಣೇಶ್ ರಾವ್, ಪತ್ರಿಕೆಯ ಸಂಪಾದಕ ಹಿರಿಯೂರು ರಾಘವೇಂದ್ರ, ಕಾರ್ಯದರ್ಶಿಗಳಾದ ಬೆಳ್ಳಿಚುಕ್ಕಿ ವೀರೇಂದ್ರ, ಪದ್ಮಾ ವಾಸಂತಿ, ರೇಣು ಶಿಕಾರಿ, ಎನ್.ಟಿ. ರಾಮಸ್ವಾಮಿ, ನಟರಾದ ಶ್ರೀನಗರ ಕಿಟ್ಟಿ ಹಾಗೂ ಡಾ. ಎ.ಆರ್. ಗೋವಿಂದಸ್ವಾಮಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಕಿರುತೆರೆ ಕ್ಷೇತ್ರದ ಕಲಾವಿದರು, ತಂತ್ರಜ್ಞರು ಹಾಗೂ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರ ಸಾಧನೆ, ಚಟುವಟಿಕೆಗಳು ಮತ್ತು ಕ್ಷೇತ್ರದ ಬೆಳವಣಿಗೆಗಳಿಗೆ ವೇದಿಕೆಯಾಗಿರುವ ‘ಟಿವಿ ಠೀವಿ’ ಗೃಹ ಪತ್ರಿಕೆಯ ಪುನರಾರಂಭ ಕೆಟಿವಿಎ ಸದಸ್ಯರಲ್ಲಿ ಸಂತಸ ಮೂಡಿಸಿದೆ.





