ಬೆಂಗಳೂರು: ಕಾಂಗ್ರೆಸ್ ಭವನ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಹಾಗೂ ಉಪ ಮುಖ್ಯಮಂತ್ರಿಗಳ ಕುರಿತು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅತ್ಯಂತ ಕೀಳು ಪದ ಬಳಸಿ ಟೀಕೆ ಮಾಡಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ಪ್ರತಿಭಟನೆ ಮಾಡಿದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಎಂ.ಇ.ಐ ಅಧ್ಯಕ್ಷ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ನೇತೃತ್ವದಲ್ಲಿ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಮೊದಲಾದವರು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಎಸ್.ಮನೋಹರ್, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮಗ ಎಂದು ಹೇಳುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮಾನಸಿಕವಾಗಿ ಸ್ಥಿಮಿತ ಕಳೆದುಕೊಂಡಿದ್ದಾರೆ. ಅಧಿಕಾರವಿದ್ದಾಗ ತಾಜ್ ವೆಸ್ಟಂಡ್ ನಲ್ಲಿ ವಾಸ ಮಾಡಿ ನಾಡಿನ ಜನರಿಗೆ ದ್ರೋಹ ಬಗೆದ ವಿಷಕಾರಿ ಹಾವು ಕುಮಾರಸ್ವಾಮಿ ಎಂದರೆ ತಪ್ಪಾಗಲಾರಾದು ಎಂದರು.
ಆರ್.ಟಿ.ಜಿ.ಎಸ್. ಲಂಚ ಸ್ವೀಕಾರ ಮಾಡಿದ ಕೀರ್ತಿ ಹೊಂದಿರುವ ಕುಟುಂಬ ಎಂದರೆ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜಯೇಂದ್ರ ಅವರಿಗೆ ಸಲ್ಲುತ್ತದೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ವಿರುದ್ದ ಬಗರ್ ಹುಕುಂ ಪ್ರಕರಣ ಸುಪ್ರಿಂಕೋರ್ಟ್ ನಲ್ಲಿ ದಾಖಲಾಗಿದೆ. ಸಿ.ಟಿ.ಲೂಟಿ ಎಂದರೆ ಚಿಕ್ಕಮಗಳೂರಿನಲ್ಲಿ ಲೂಟಿ ರವಿ ಎಂದು ಸಾರ್ವಜನಿಕರು ಕರೆಯುತ್ತಾರೆ ಎಂದರು.
ಪ್ರಧಾನಿ ನರೇಂದ್ರಮೋದಿ ಅವರು ಕೂಡಲೆ ಎಚ್.ಡಿ.ಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರ, ಆರ್.ಅಶೋಕ್, ಸಿ.ಟಿ.ರವಿಯವರಿಗೆ ಮಾನಸಿಕ ಚಿಕಿತ್ಸೆ ಕೊಡಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕೆಪಿಸಿಸಿ ಮಾಧ್ಯಮ ಮುಖ್ಯಸ್ಥ ರಮೇಶ್ ಬಾಬು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ ಆನಂದ್, ಜಿ ಪ್ರಕಾಶ್, ಹೇಮರಾಜು, ಚೇತನ್, ರಂಜಿತ್, ಉಮೇಶ್, ನವೀನ್, ರವಿಶೇಖರ್ ಹಾಗೂ ಮಹಿಳಾ ಕಾಂಗ್ರೆಸ್ ನ ಜಯಶ್ರೀ ಗೌಡ ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.




