ಬಳ್ಳಾರಿ: ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ 2025-26ನೇ ಸಾಲಿಗೆ ಪ್ರಧಾನಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಒಂಟಿ ಮಹಿಳೆಯರು, ಅಂಗವಿಕಲರು, ಹಿರಿಯ ನಾಗರಿಕರು, ತೃತೀಯಲಿಂಗಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ವರ್ಗ, ಸ್ವಚ್ಚತಾ ಕಾರ್ಮಿಕರು, ಪಿಎಂ ಸ್ವಾನಿಧಿ ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಗುರುತಿಸಿದ ಕುಶಲಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೈಗಾರಿಕರು, ವಲಸೆ ಬಂದ ಕುಟುಂಬದವರು ಅರ್ಜಿ ಸಲ್ಲಿಸಬಹುದು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಆನ್‌ಲೈನ್ ವೆಬ್‌ಸೈಟ್ https://pmay-urban.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಜುಲೈ 15 ಅರ್ಜಿ ಸಲ್ಲಿಸಲು ಕೊನೆಯ ದಿನ.
ಬೇಕಾದ ದಾಖಲೆಗಳು: ಆಧಾರ್ ಕಾರ್ಡ್ (ಮನೆಯ ಯಜಮಾನ/ನಿ ಹಾಗೂ ತಂದೆ/ತಾಯಿಯ ಮತ್ತು ಪಡಿತರ ಚೀಟಿಯಲ್ಲಿರುವಂತೆ) ಮತ್ತು ಕುಟುಂಬ ಸದಸ್ಯರ ಆಧಾರ್ ಕಾರ್ಡ್ಗಳು. ವಸತಿ ರಹಿತರಾದಲ್ಲಿ ನಿವೇಶನಕ್ಕೆ ಸಂಬಂಧಿಸಿದ ದಾಖಲೆಗಳು (ಹಕ್ಕು ಪತ್ರ, ಕ್ರಯ ಪತ, ದಾನ ಪತ್ರ, ಉಡುಗೋರೆ ಪತ್ರ, ಖಾತಾ ನಕಲು ಫಾರಂ-3).
ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ನಿಗದಿತ ನಮೂನೆ (Annexure-2A/2B/2C) ಯಲ್ಲಿ “Self Undertaking” ಸಲ್ಲಿಸುವುದು. ಮೊಬೈಲ್ ಸಂಖ್ಯೆ, ಪ್ಯಾನ್ ಕಾರ್ಡ್ (ಲಭ್ಯವಿದ್ದಲ್ಲಿ ಮಾತ್ರ).
ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕುರುಗೋಡು ಪುರಸಭೆ ಕಾರ್ಯಾಲಯ ಕಚೇರಿಗೆ ಸಂಪರ್ಕಿಸಬಹುದು.




