ಶಿವಮೊಗ್ಗ: ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ 34ನೇ ವಾರ್ಷಿಕ ಘಟಿಕೋತ್ಸವ ಜುಲೈ/ಆಗಸ್ಟ್-2024 ಮಾಹೆಯಲ್ಲಿ ಜರುಗಲಿದೆ. ರೆಗ್ಯೂಲರ್ನ ಮಾರ್ಚ್-2023ರ ಸ್ನಾತಕ/ಸ್ನಾತಕೋತ್ತರ, ಸೆಪ್ಟಂಬರ್-2023ರ ಸ್ನಾತಕೋತ್ತರ (ಯು.ಯು.ಸಿ.ಎಂ.ಎಸ್.), ಜನವರಿ-2024ರ ಬಿ.ಇಡಿ ಪದವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ಪದವಿಧರರು ಹಾಗೂ ದೂರಶಿಕ್ಷಣದ ಮೂಲಕ ನವೆಂಬರ್-2022 ರ ಸ್ನಾತಕೋತ್ತರ, ಅಕ್ಟೋಬರ್-203ರ ಸ್ನಾತಕ/ಸ್ನಾತಕೋತ್ತರ, ಮಾರ್ಚ್-2024ರ ಸ್ನಾತಕ/ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ಮತ್ತು ಪಿಹೆಚ್.ಡಿ ಪದವಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಘಟಿಕೋತ್ಸವದಲ್ಲಿ ಪದವಿ, ರ್ಯಾಂಕ್/ನಗದು ಬಹುಮಾನ, ಪ್ರಮಾಣ ಪತ್ರ ಪ್ರದಾನ ಮಾಡಲಾಗುವುದು. ಅರ್ಜಿಯನ್ನು ನೇರವಾಗಿ ವಿಶ್ವವಿದ್ಯಾಲಯದ ವೆಬ್ಸೈಟ್ www.kuvempu.ac.in ಮೂಲಕ ಸಲ್ಲಿಸಬಹುದಾಗಿದೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ವಿದ್ಯಾರ್ಥಿಗಳು ನಿಗದಿತ ಅರ್ಜಿ ಶುಲ್ಕ ಮತ್ತು ಇತರೆ ಮಾಹಿತಿಗಳನ್ನು ವಿಶ್ವವಿದ್ಯಾಲಯದ ವೆಬ್ಸೈಟ್ www.kuvempu.ac.in ನಲ್ಲಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ. ಸ್ನಾತಕ ಪದವಿ (ರೆಗ್ಯೂಲರ್)-7022254997, ಸ್ನಾತಕೋತ್ತರ ಪದವಿ/ವೃತ್ತಿಪರ ಕೋರ್ಸ್ (ರೆಗ್ಯೂಲರ್)-7022254993, ದೂರಶಿಕ್ಷಣ-7022255891, ಕಂಪ್ಯೂಟರ್ ವಿಭಾಗ- 8904712601, ತಾಂತ್ರಿಕ ಸಹಾಯಕ್ಕಾಗಿ 7022255745/ 8183098136 /8183098138 ಅಥವಾ ಈ ಮೇಲ್ ವಿಳಾಸ kusconvo@gmail.com ಮೂಲಕ ಸಂಪರ್ಕಿಸುವಂತೆ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.




