ಬೆಂಗಳೂರು: ರಾಜ್ಯದ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಕಲ್ಯಾಣ ನಿಧಿ ಬಳಸಿಕೊಂಡು ಮಾಡಲಾಗುತ್ತಿರುವ ಆರೋಗ್ಯ ತಪಾಸಣೆ ಯೋಜನೆಯಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ನಡೆದಿದ್ದು, ಇದರಲ್ಲಿ ಕಾರ್ಮಿಕರ ಸಚಿವ ಸಂತೋಷ್ ಲಾಡ್ ನೇರವಾಗಿ ಶಾಮೀಲಾಗಿದ್ದಾರೆ ಎಂದು ಬಿಜೆಪಿ ಆಪಾದಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಪರಿಷತ್ ನ ಬಿಜೆಪಿ ಸದಸ್ಯ ಕೆ ಎಸ್ ನವೀನ್, ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಿನಲ್ಲಿ ದೊಡ್ಡ ಪ್ರಮಾಣದ ಗೋಲ್‌ಮಾಲ್ ನಡೆಯುತ್ತಿದೆ ಇದರಲ್ಲಿ ಸಚಿವ ಸಂತೋಷ್ ಲಾಡ್ ಶಾಮೀಲು ಆಗಿದ್ದಾರೆ ಎಂದು ಆರೋಪಿಸಿದರು.
ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯಿಂದ ಕಾರ್ಮಿಕರ ಆರೋಗ್ಯ ತಪಾಸಣೆಯ ಹೆಸರಿನಲ್ಲಿ ಸುಳ್ಳು ತಪಾಸಣೆಯ ದಾಖಲೆಗಳನ್ನು ನೀಡಿದ್ದಾರೆ. ತಪಾಸಣೆ ನಡೆಸದೇ ಇಡೀ ರಾಜ್ಯದಿಂದ ಅಂದಾಜು 300 ಕೋಟಿಗಿಂತ ಹೆಚ್ಚು ಹಣವನ್ನು ಪಡೆದು ಸರ್ಕಾರ ಲೂಟಿ ಹೊಡೆದಿದೆ. ಇಲ್ಲಿ ಕಾರ್ಮಿಕ ಕಳ್ಳನಲ್ಲ ಹಾಗಾದರೆ ಕಾರ್ಮಿಕ ಸಚಿವ ಕಳ್ಳಾನಾ? ಎಂದು ಕೇಳಿದರು.
ಕಟ್ಟಡ ಕಾರ್ಮಿಕರ ನಿಗಮಕ್ಕೆ ಸಾವಿರಾರು ಕೋಟಿ ಹಣವನ್ನು ಸೆಸ್ ಮೂಲಕ ಸಂಗ್ರಹ ಮಾಡಿ, ಅದನ್ನು ಕಟ್ಟಡ ಕಾರ್ಮಿಕರ ಕಲ್ಯಾಣಕ್ಕೆ ಬಳಕೆ ಮಾಡಲಾಗುತ್ತದೆ. ಈ ಯೋಜನೆಯಲ್ಲಿ ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಯುತ್ತದೆ. ಈ ಪೈಕಿ ಕಾರ್ಮಿಕರಿಗೆ 20 ಆರೋಗ್ಯ ತಪಾಸಣೆ ಮಾಡಲು ಮಂಡಳಿ ನಿರ್ಧರಿಸಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 2 ವರ್ಷ ಅವಧಿಯಲ್ಲಿ ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಿರುವ ಮಾಹಿತಿಯಂತೆ 67 ಸಾವಿರ ಕಾರ್ಮಿಕರಿಗೆ ಒಟ್ಟು 19 ಕೋಟಿ 74 ಲಕ್ಷ ರೂಗಳನ್ನು ಖರ್ಚು ಮಾಡಿರುವ ಬಗ್ಗೆ ತಿಳಿಸಿರುತ್ತಾರೆ ಎಂದರು.
ಹೋಟೆಲ್‍ನಲ್ಲಿ ಇಡ್ಲಿ, ಸಾಂಬಾರ್ ಮತ್ತು ಚಟ್ನಿಗೆ ಬೇರೆಬೇರೆ ದರ ನಿಗದಿ ಮಾಡಿದರೆ ಹೇಗಿರುತ್ತದೋ ಹಾಗೆ ಕಾರ್ಮಿಕರ ಆರೋಗ್ಯ ತಪಾಸಣೆಗೂ ದರ ನಿಗದಿಪಡಿಸಿ ಹಣವನ್ನು ಡ್ರಾ ಮಾಡಿ ಅವ್ಯವಹಾರ ಮಾಡಿದ್ದಾರೆ. ಕೇಂದ್ರ ಸರ್ಕಾರ ಸರ್ಕಾರಿ ನೌಕರರಿಗೆ ನಿಗದಿ ಪಡಿಸಿರುವ ಆರೋಗ್ಯ ತಪಾಸಣೆ ವೆಚ್ಚಕ್ಕಿಂತ ಒಂದೂವರೆ ಪಟ್ಟು ಜಾಸ್ತಿ ನಿಗದಿಪಡಿಸಿ ತಪಾಸಣೆಯ ಹಣವನ್ನು ಪಾವತಿ ಮಾಡಿದ್ದಾರೆ ಎಂದರು.
ಇಲಾಖೆ ನೀಡಿರುವ ಮಾಹಿತಿಯಲ್ಲಿ ನಾವು ಗಮನಿಸಬೇಕಾದ ಅಂಶವೇನೆಂದರೆ, ಚಿತ್ರದುರ್ಗ ಜಿಲ್ಲೆಯ 5 ಕಾರ್ಮಿಕರ ಸಂಘಟನೆಗಳ ಪೈಕಿ ಕಟ್ಟಡ ಕಾರ್ಮಿಕ ಮಂಡಳಿಯಲ್ಲಿ ಅಧಿಕೃತವಾಗಿ ನೋಂದಣಿ ಮಾಡಿರುವ ಕಟ್ಟಡ ಕಾರ್ಮಿಕರ ಸಂಖ್ಯೆ ಕೇವಲ 6 ಸಾವಿರ. ಆದರೆ ಸರ್ಕಾರದ ಲೆಕ್ಕದಲ್ಲಿ 33,500 ಕಟ್ಟಡ ಕಾರ್ಮಿಕರ ವಿವರ ಇದೆ ಎಂದರು.
ಮಂಡಳಿಯು 15 ದಿನಗಳ ಕ್ಯಾಂಪ್ ಮಾಡಿ 33500 ಜನಕ್ಕೂ ತಪಾಸಣೆ ಮಾಡಿದ್ದು, ಒಬ್ಬ ಕಾರ್ಮಿಕನಿಗೆ 2,940 ರೂ. ಮೊತ್ತದಂತೆ ಆರೋಗ್ಯ ತಪಾಸಣೆ ಮಾಡಿದ್ದೇವೆ ಎಂದು ವರದಿ ನೀಡಿದ್ದಾರೆ. ತಪಾಸಣೆ ಮಾಡಿರುವ ಆಸ್ಪತ್ರೆಯ ಮುದ್ರೆ ಮತ್ತು ಸಹಿ ಇಲ್ಲ. ಮಂಡಳಿ ನಿಗದಿಪಡಿಸಿರುವ 20 ಟೆಸ್ಟ್ ಆರೋಗ್ಯ ತಪಾಸಣೆಯಲ್ಲಿ ಸುಮಾರು 16 ಟೆಸ್ಟ್ ಗಳು ರಕ್ತಕ್ಕೆ ಸಂಬಂಧಿಸಿದಂತೆ ಇದೆ. ಆದರೆ ಒಂದು ಬಾರಿ ಮಾಡುವ ರಕ್ತದ ಟೆಸ್ಟ್ ಅನ್ನು ಒಂದೊಂದು ಟೆಸ್ಟ್ ಗಳಿಗೆ ಪ್ರತ್ಯೇಕ ಟೆಸ್ಟ್ ದರವನ್ನು ತೋರಿಸುವ ಮೂಲಕ ಅವ್ಯವಹಾರ ಮಾಡಿದ್ದಾರೆ ಎಂದರು.
ಚಿತ್ರದುರ್ಗ ಜಿಲ್ಲೆಗೆ 19 ಕೋಟಿ 74 ಲಕ್ಷ ರೂ ಹಣವನ್ನು ಡ್ರಾ ಮಾಡಿ ಆಸ್ಪತ್ರೆಗಳಿಗೆ ಕೊಡುವ ಕೆಲಸ ಮಾಡಿದ್ದಾರೆ. ಕಾರ್ಮಿಕರು ಮತ್ತು ಅವರ ಮಕ್ಕಳಿಗೂ ಇದರ ಲಾಭ ಸಿಗಬೇಕು ಎಂದು ಹೇಳಿ 7, 9, 14 ಮತ್ತು 15 ವರ್ಷದ ಕಾರ್ಮಿಕರ ಮಕ್ಕಳ ಹೆಸರಿಗೂ ತಪಾಸಣೆಯನ್ನು ಮಾಡಿದ್ದಾರೆ. ಆದರೆ 60 ವರ್ಷದ ವ್ಯಕ್ತಿಗೆ ಮಾಡುವ ತಪಾಸಣೆಯನ್ನು 9 ವರ್ಷದ ಮಗುವಿಗೂ ಮಾಡಿದ್ದೇವೆ ಎಂದು ತಪಾಸಣೆಯ ಹಣ ಪಡೆದಿದ್ದಾರೆ ಎಂದರು.




