ಬೆಳಗಾವಿ: ಅಂಗನವಾಡಿಯಲ್ಲಿ ಕಲಿಯುತ್ತಿರುವ ಮಕ್ಕಳು ಖಾಸಗಿ ಶಾಲೆಗಳಿಗೆ ಹೋಗುವುದನ್ನು ತಪ್ಪಿಸುವ ಸಲುವಾಗಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಇದರಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪಾತ್ರ ಬಹಳ ದೊಡ್ಡದು ಎಂದು ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ ನಗರ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೋಷಣ್ ಮಾಸಾಚರಣೆ- 2025 ರ ಅಂಗವಾಡಿ ಅನ್ನಪ್ರಾಶನ, ಅಕ್ಷರ ಅಭ್ಯಾಸ, ಗರ್ಭಿಣಿಯರಿಗೆ ಸೀಮಂತ, ಮಕ್ಕಳಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ ಮತ್ತು ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ವಾಹನಗಳ ವಿತರಣೆ ಮೊದಲಾದ ಕಾರ್ಯಕ್ರಮಗಳನ್ನು ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಚಿವರು ಕೇವಲ ಆದೇಶ ಮಾಡದೆ, ಕೇಂದ್ರ ಸರ್ಕಾರದ ಮನವೊಲಿಸಿ ಸುಮಾರು 17 ಸಾವಿರ ಸಕ್ಷಮ್ ಅಂಗನವಾಡಿ ಕೇಂದ್ರಗಳಿಗೆ ಅನುದಾನ ತಂದರು. ಕೇಂದ್ರದಿಂದ 50 ರಷ್ಟು ಅನುದಾನ, ಜೊತೆಗೆ ಕರ್ನಾಟಕ ಸರ್ಕಾರ ಕೂಡ ಉಳಿದ 50 ರಷ್ಟು ಅನುದಾನ ನೀಡಿದೆ. ಪ್ರತಿಯೊಂದು ಹಂತದಲ್ಲೂ ಇಲಾಖೆಯ ಕೆಲಸಗಳನ್ನು ಸಚಿವರು ಉತ್ತಮವಾಗಿ ಮಾಡಿಕೊಂಡು ಬರುತ್ತಿದ್ದಾರೆ ಎಂದರು.
ಇಲಾಖೆಯ ಮೂಲ ಉದ್ದೇಶ ಮಕ್ಕಳಿಗೆ ಪೌಷ್ಠಿಕತೆ ನೀಡುವುದು. ಈ ಹಿನ್ನೆಲೆಯಲ್ಲಿ ಮಾಡುತ್ತಿರುವ ಮಾಸಾಚರಣೆಯ ವೇಳೆ ಇಲಾಖೆಯ ಕಾರ್ಯಕರ್ತರು ಕಟ್ಟುನಿಟ್ಟಾಗಿ ಮಾಡಬೇಕು, ಮುಂದಿನ ದಿನಗಳಲ್ಲಿ ಸಚಿವರು ಉತ್ತಮ ಯೋಜನೆಗಳನ್ನು ತರಲಿದ್ದಾರೆ, ಇನ್ನೂ ಎತ್ತರಕ್ಕೆ ಇಲಾಖೆಯನ್ನು ಕೊಂಡೊಯ್ಯಲಿದ್ದಾರೆ, ನಿಮ್ಮ ಆಶೀರ್ವಾದ ಸಚಿವರ ಮೇಲಿರಲಿ ಎಂದರು.




