ಬೆಂಗಳೂರು: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಆಪ್ತ ಹಾಗೂ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ವಿರುದ್ಧ ಭೂ ಕಬಳಿಕೆ ಆರೋಪ ಕೇಳಿಬಂದಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸ್ಯಾಮ್ ಪಿತ್ರೋಡಾ ವಿರುದ್ಧ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿರುವ ಬಿಜೆಪಿ ನಾಯಕ ಎನ್ ಆರ್ ರಮೇಶ್, ಬೆಂಗಳೂರಿನ ಯಲಹಂಕ ಬಳಿಯ ಜಾರಕಬಂಡೆ ಮೀಸಲು ಅರಣ್ಯ ಪ್ರದೇಶದಲ್ಲಿ 12.35 ಎಕರೆ ಜಮೀನನ್ನು ಪಿತ್ರೋಡಾ ಅವರಿಗೆ 2001 ರಲ್ಲಿ ಗುತ್ತಿಗೆ ನೀಡಲಾಗಿತ್ತು. ಈ ಭೂಮಿಯನ್ನು ಸ್ಯಾಮ್ ಪಿತ್ರೋಡಾ ಕಬಳಿಸಲು ಸಂಚು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಸ್ಯಾಮ್ ಪಿತ್ರೋಡಾ ನೇತೃತ್ವದ ಸಂಸ್ಥೆಗೆ ಔಷಧೀಯ ಗಿಡಮೂಲಿಕೆಗಳನ್ನು ಬೆಳೆಸುವ ಉದ್ದೇಶದಿಂದ ಅಂದಿನ ಸರ್ಕಾರ 10 ವರ್ಷಗಳ ಅವಧಿಗೆ ಈ ಜಮೀನನ್ನು ಗುತ್ತಿಗೆಗೆ ನೀಡಿತ್ತು. 2011ರಲ್ಲಿ ಗುತ್ತಿಗೆ ಅವಧಿ ಮುಕ್ತಾಯಗೊಂಡರೂ ಪಿತ್ರೋಡಾ ಜಮೀನನ್ನು ತಮ್ಮ ವಶದಲ್ಲೇ ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಜಮೀನಿನಲ್ಲಿ ಬೆಳೆದ ಗಿಡಮೂಲಿಕೆಗಳಿಂದ ಪಿತ್ರೋಡಾ ಅವರಿಗೆ ವಾರ್ಷಿಕ ಕೋಟ್ಯಂತರ ರೂಪಾಯಿ ಆದಾಯ ಬರುತ್ತಿದೆ ಎಂದು ಹೇಳಲಾಗಿದೆ. ಕಳೆದ 15 ವರ್ಷಗಳಿಂದ ಮೀಸಲು ಅರಣ್ಯ ಪ್ರದೇಶವನ್ನು ಅಕ್ರಮವಾಗಿ ಪಿತ್ರೋಡಾ ಅವರು ಸ್ವಾಧೀನ ಪಡಿಸಿಕೊಂಡಿದ್ದಾರೆ ಮತ್ತು ಈ ಜಮೀನಿನ ಪ್ರಸ್ತುತ ಮಾರುಕಟ್ಟೆ ಮೌಲ್ಯ 400 ಕೋಟಿ ರೂಪಾಯಿಗೂ ಹೆಚ್ಚು ಎಂದು ರಮೇಶ್ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಈ ಅಕ್ರಮಕ್ಕೆ ರಾಜ್ಯ ಸರ್ಕಾರದ ಕೆಲವು ಅಧಿಕಾರಿಗಳು ಮತ್ತು ಕಾಂಗ್ರೆಸ್ ನಾಯಕರು ಕುಮ್ಮಕ್ಕು ನೀಡಿರುವ ಅನುಮಾನವಿದೆ. ಈ ಬಗ್ಗೆ ತನಿಖೆ ಮಾಡಬೇಕು ಹಾಗೆಯೇ ಅವರಿಗೆ ನೀಡಲಾಗಿರುವ ಜಮೀನು, ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.




