ವಚನ ಚಳವಳಿಯ ಮೂಲಕ ನಾಡಿಗೆ ವಿಚಾರ ಕ್ರಾಂತಿಯನ್ನು ಪರಿಚಯಿಸಿದ ಕಲ್ಯಾಣ ಕರ್ನಾಟಕವು ಅಂದಿನಿಂದ ಇಂದಿನವರೆಗೂ ವೈಚಾರಿಕ ಪ್ರಜ್ಞೆಯಲ್ಲಿ ಸದಾ ಮುಂದಿದೆ. ಇಂತಹ ಕಲ್ಯಾಣ ಶರಣರ ನಾಡು ಎಂದಿಗೂ RSS, ಬಿಜೆಪಿಯವರ ಮಲಿನ ಚಿಂತನೆಗಳಿಗೆ ಅವಕಾಶ ಕೊಡುವುದಿಲ್ಲ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಶಕ್ತಿಯನ್ನು ನಂಬಿರುವ ಕಲಬುರಗಿಯ ಜನರು ಇಂದು ನನ್ನ ಪರವಾಗಿ ಬೃಹತ್ ಮಟ್ಟದ ವೈಚಾರಿಕ ಬೆಂಬಲವನ್ನು ದಾಖಲಿಸಿದ್ದು ನನ್ನ ಋಣಭಾರವನ್ನು ಇನ್ನಷ್ಟು ಹೆಚ್ಚಿಸಿದೆ.
ಕಲಬುರಗಿಯ ಪ್ರಬುದ್ಧ ಜನರೇ, ಸತ್ಯದ ಹಾದಿಯಲ್ಲಿ ನಡೆಯುವವರಿಗೆ, ಜನಹಿತಕ್ಕಾಗಿ ಬದುಕುವವರಿಗೆ ಎಂದಿಗೂ ಬೆಂಬಲ ಇದ್ದೇ ಇರುತ್ತದೆ ಎಂಬುದನ್ನು ನೀವು ಮತ್ತೊಮ್ಮೆ ಸಾಬೀತುಪಡಿಸಿದ್ದೀರಿ.
ನನ್ನನ್ನು ಕೇವಲ ರಾಜಕಾರಣಿಯನ್ನಾಗಿ ನೋಡದೆ, ನಿಮ್ಮಲ್ಲಿ ಒಬ್ಬ ಎಂದು ಪರಿಗಣಿಸಿ ತೋರಿಸುತ್ತಿರುವ ಪ್ರೀತಿ, ಕಾಳಜಿ ನನ್ನನ್ನು ಮೂಕವಿಸ್ಮಿತನನ್ನಾಗಿಸಿದೆ.
ರಾಜಕೀಯವಾಗಿ, ಸೈದ್ಧಾಂತಿಕವಾಗಿ, ವೈಚಾರಿಕವಾಗಿ ನನ್ನನ್ನು ಎದುರಿಸಲು ಸಾಧ್ಯವಾಗದ ಬಿಜೆಪಿಯವರು ವೈಯಕ್ತಿಕ ದಾಳಿಗಳ ಮೂಲಕ ನನ್ನ ತೇಜೋವಧೆಗೆ ಪ್ರಯತ್ನಿಸುತ್ತಿರುವುದನ್ನು ಕಂಡು ಸಹಿಸದೆ ಪ್ರಜ್ಞಾವಂತ ನಾಗರಿಕರಾದ ನೀವು ಸಿಡಿದೆದ್ದಿದ್ದೀರಿ.
ನನ್ನ ಮೇಲೆ ಅಪಾರ ವಿಶ್ವಾಸ ಇರಿಸಿರುವ ನೀವು, ನನ್ನಲ್ಲಿನ ಸ್ಥೈರ್ಯ ಕೊಂಚವೂ ಕುಗ್ಗದಂತೆ ಬಲ ತುಂಬಿದ್ದೀರಿ. ನಿಮ್ಮ ಈ ಅಭಿಮಾನ, ಪ್ರೀತಿಯನ್ನು ವರ್ಣಿಸಲು ನನ್ನಲ್ಲಿ ಪದಗಳಿಲ್ಲ.
ನನ್ನ ಮೇಲಿನ ಪ್ರತಿ ದಾಳಿಗೂ ಸಾವಿರಾರು ವಿರೋಧದ ಧ್ವನಿಗಳು ಅನುರಣಿಸುತ್ತವೆ, ಕೀಳು ತಂತ್ರಗಳಿಗೆ ಎದಿರೇಟು ನೀಡುವ ಜನಶಕ್ತಿ ನನ್ನೊಂದಿಗೆ ಇದೆ ಎಂಬುದನ್ನು ಮನುವಾದಿಗಳಿಗೆ ಮನವರಿಕೆ ಮಾಡಿದ್ದೀರಿ. ನಾವೆಲ್ಲರೂ ಬಾಬಾ ಸಾಹೇಬರ ಆದರ್ಶಗಳು, ಸಂವಿಧಾನದ ತತ್ವಗಳನ್ನು ಪಾಲಿಸುವವರು. ನಮ್ಮ ಹೋರಾಟಗಳು ಸತ್ಯದ ಪರವಾಗಿರುತ್ತದೆ. ಆಚಾರವಿಲ್ಲದ ನಿಮ್ಮ ನಾಲಿಗೆ ಆಡುವ ಹೊಲಸು ಮಾತುಗಳಿಂದ ನಮ್ಮನ್ನು ಹಣಿಯಲು ಸಾಧ್ಯವಿಲ್ಲ ಎಂಬುದನ್ನು ಮನುಸ್ಮೃತಿ ಆರಾಧಕರಿಗೆ ಮತ್ತೊಮ್ಮೆ ಅರ್ಥಮಾಡಿಸಿದ್ದೀರಿ.
ಸಮಾಜದ ಸ್ವಾಸ್ಥ್ಯ ಕೆಡಿಸುವ ಮನುವಾದದ ಮನಸ್ಥಿತಿಯವರ ಕುತಂತ್ರಗಳು ಸಫಲವಾಗುವುದಿಲ್ಲ. ಪ್ರಿಯಾಂಕ್ ಖರ್ಗೆ ಒಂಟಿಯಲ್ಲ, ನನ್ನೊಂದಿಗೆ ಬಾಬಾ ಸಾಹೇಬರನ್ನು ಅನುಸರಿಸುವ ಹಾಗೂ ಬಸವಣ್ಣನನ್ನು ಆರಾಧಿಸುವ ಸಾವಿರಾರು ಪಡೆಗಳಿವೆ ಎನ್ನುವ ಸಂಗತಿ ನನ್ನಲ್ಲಿ ಮತ್ತಷ್ಟು ಶಕ್ತಿ, ಆತ್ಮವಿಶ್ವಾಸ ತುಂಬಿದೆ.
ನಿಮ್ಮೆಲ್ಲರ ಈ ಪ್ರೀತಿ, ಈ ಅಭಿಮಾನ, ಈ ಅಭೂತಪೂರ್ವ ಬೆಂಬಲವು ನನ್ನಲ್ಲಿ ಮತ್ತಷ್ಟು ಶಕ್ತಿ ತುಂಬಿದೆ. ಸಾಮಾಜಿಕ ಪಿಡುಗಿನಂತಾಗಿರುವ ಮನುವಾದಿಗಳನ್ನು ಎದುರಿಸುವ ಕೆಲಸವನ್ನು ನಿಮ್ಮೆಲ್ಲರ ಬೆಂಬಲದೊಂದಿಗೆ ನಾನು ಮುಂದುವರೆಸುತ್ತಲೇ ಇರುತ್ತೇನೆ. ಅಸಹಾಯಕರ, ಶೋಷಿತರ ಏಳಿಗೆಗಾಗಿ ನನ್ನ ಪ್ರಾಮಾಣಿಕ ಪ್ರಯತ್ನವನ್ನು ಮುಂದುವರೆಸುತ್ತಿರುತ್ತೇನೆ.
ಬಸವಣ್ಣ ನನಗೆ ವೈಚಾರಿಕ ಶಕ್ತಿ,
ಬಾಬಾ ಸಾಹೇಬರು ನನಗೆ ನೈತಿಕ ಶಕ್ತಿ,
ನಿಮ್ಮೆಲ್ಲರ ಬೆಂಬಲ ನನಗೆ ಆತ್ಮಶಕ್ತಿ.
ನಿಮ್ಮೆಲ್ಲ ಪ್ರೀತಿ, ವಿಶ್ವಾಸಕ್ಕೆ ನಾನು ಸದಾ ಋಣಿಯಾಗಿ ಕೆಲಸ ಮಾಡುತ್ತೇನೆ.
ಇಂತಿ ನಿಮ್ಮವ
– ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ




