ಭೂ ಕುಸಿತ: 13ಕ್ಕೆ ಏರಿದ ಸಾವಿನ ಸಂಖ್ಯೆ

5 years ago

ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ನಿನ್ನೆ ಸಂಭವಿಸಿದ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಅವಶೇಷಗಳ ಅಡಿಯಲ್ಲಿ ಇನ್ನೂ ಹಲವರು ಸಿಲುಕಿಕೊಂಡಿದ್ದು, ಶೋಧಕಾರ್ಯ ಮುಂದುವರೆದಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಂಭವ ಇದೆ.

ಭೂ ಕುಸಿತ  ಸಾವಿನ ಸಂಖ್ಯೆ ಏರಿಕೆ ನಿರೀಕ್ಷೆ

ಎನ್ ಡಿಆರ್ ಎಫ್ ಘಟನೆ ನಡೆದ ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯ ಮುಂದುವರೆಸಿದೆ. ಇದುವರೆಗೆ 13 ಸಂತ್ರಸ್ತರನ್ನು ರಕ್ಷಿಸಲಾಗಿದೆ. ಭೂಕುಸಿತಕ್ಕೆ ಬಸ್ ನಿನ್ನೆ ಸಿಲುಕಿತ್ತು. ಬೊಲೆರೊ ಮತ್ತು ಅದರಲ್ಲಿದ್ದ ಯಾತ್ರಿಗಳು ಅವಶೇಷಗಳಡಿಯಲ್ಲಿ ಸಿಲುಕಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಸಂತ್ರಸ್ತರ ಕುಟುಂಬಕ್ಕೆ ಪ್ರಧಾನಿ ಪರಿಹಾರ

ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ನಡೆದ ಭೂಕುಸಿತ ನಿಜಕ್ಕೂ ದುಃಖಕರ ಸಂಗತಿ. ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ನನ್ನ ಸಂತಾಪ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಬಲಿಯಾದವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ, ಗಾಯಗೊಂಡವರ ಕುಟುಂಬಕ್ಕೆ ತಲಾ 50,000 ರೂಪಾಯಿ ಪರಿಹಾರ ನೀಡುವುದಾಗಿ ಹೇಳಿದ್ದಾರೆ.

Leave a Reply