ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್‌ಟಾಪ್ ವಿತರಿಸಲು ಸರ್ಕಾರ ಮುಂದಾಗಿದ್ದು ಈಗಾಗಲೇ 4 ಸಾವಿರ ಲ್ಯಾಪ್ಟಾಪ್ ಖರೀದಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಕಂದಾಯ ಸಚಿವರಾದ ಕೃಷ್ಣಭೈರೇಗೌಡ ವಿಧಾನಪರಿಷತ್ ನಲ್ಲಿ ತಿಳಿಸಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಪ್ರಶೋತ್ತರ ವೇಳೆ ಬಿಜೆಪಿಯ ಕೇಶವ ಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು 2024-25 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಲ್ಯಾಪ್ಟಾಪ್ ಖರೀದಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದರು.
ಗ್ರಾಮ ಆಡಳಿತ ಅಧಿಕಾರಿಗಳಿಗೆ ಒದಗಿಸುವ ಛಾವಡಿಗಳು ಕಂದಾಯ ಇಲಾಖೆಯ ಸುಪರ್ಧಿಗೆ ಸೇರಿರುತ್ತವೆ; ಈ ಛಾವಡಿಗಳು ಶಿಥಿಲಗೊಂಡಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಅವುಗಳ ಪುನರ್ ನಿರ್ಮಾಣ ಮಾಡಲು ಪರಿಶೀಲಿಸಲಾಗುವುದು ಎಂದರು.
ವಿಜಯಪುರ ಜಿಲ್ಲೆಯಲ್ಲಿ 82 ಗ್ರಾಮ ಛಾವಡಿಗಳು ಇರುತ್ತವೆ ಹಾಗೂ 126 ಗ್ರಾಮಗಳಲ್ಲಿ ಗ್ರಾಮ ಛಾವಡಿಗಳು ಇರುವುದಿಲ್ಲ; ಗ್ರಾಮ ಛಾವಡಿಗಳನ್ನು ನಿರ್ಮಿಸುವ ಬಗ್ಗೆ ನಿಯಮಾನುಸಾರ ಪರಿಶೀಲಿಸಲಾಗುವುದು ಎಂದರು.
ಗ್ರಾಮಪಂಚಾಯ್ತಿಯ ಆಡಳಿತ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಸ್ಥಳಗಳಲ್ಲಿ ದಾಖಲೆಗಳನ್ನು ಸಂರಕ್ಷಿಸಿಕೊಳ್ಳಲು ಅವರಿಗೆ ಕಪಾಟುಗಳನ್ನು ಒದಗಿಸಲಾಗಿದೆ ಹಾಗೂ ಲೇಖನ ಸಾಮಗ್ರಿಗಳನ್ನು ನೀಡಲಾಗುತ್ತಿದೆ ಮತ್ತು ಪ್ರಯಾಣ ಭತ್ಯೆಗಳನ್ನು ಒದಗಿಸಲಾಗುತ್ತಿದೆ ಎಂದರು.




