ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಪ್ರಕರಣ ಬಗ್ಗೆ ಎಸ್‌ಐಟಿ ತನಿಖೆಯನ್ನು ಚುರುಕುಗೊಳಿಸಿದ್ದು, ಠಾಣೆಗೆ ಬುರುಡೆ ತಂದಿದ್ದ ತಂಡಕ್ಕೆ ದೊಡ್ಡ ಪ್ರಮಾಣದಲ್ಲಿ ಹಣಕಾಸು ಹರಿದು ಬಂದಿರುವುದು ಪತ್ತೆಯಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದಿರುವ ಎಸ್ಐಟಿ ಹಣ ವರ್ಗಾವಣೆ ಮಾಡಿರುವ ಮತ್ತು ಹಣ ಪಡೆದಿರುವ 11 ಮಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಪ್ರಮುಖವಾಗಿ ಚಿನ್ನಯ್ಯ ಹಾಗೂ ಅವರ ಪತ್ನಿಯ ಅಕೌಂಟ್‌ಗೆ ಹಣ ವರ್ಗಾವಣೆ ಮಾಡಿದವರ ಬಗ್ಗೆ ಎಸ್‌ಐಟಿ ಮಾಹಿತಿ ಕಲೆ ಹಾಕಿದ್ದಲ್ಲದೇ ಆತನ ಕುಟುಂಬದ ಪ್ರತಿಯೊಬ್ಬರ ಬ್ಯಾಂಕ್ ಖಾತೆಯ ಮಾಹಿತಿಗಳನ್ನು ಪಡೆದು ಪರಿಶೀಲಿಸುತ್ತಿದೆ. ಮಹಿಳೆಯರ ಖಾತೆಯಿಂದಲೂ ಚಿನ್ನಯ್ಯನ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿರುವುದು ಎಸ್‌ಐಟಿ ತನಿಖೆಯಲ್ಲಿ ಬಯಲಾಗಿದೆ.
ಸದ್ಯ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರು ಸೇರಿದಂತೆ 11 ಜನರಿಗೆ ಎಸ್‌ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದು, ಈಗಾಗಲೇ 6 ಮಂದಿಯನ್ನು ವಿಚಾರಣೆ ನಡೆಸಿದ್ದಾರೆ.
ಕಳೆದ ಒಂದು ವರ್ಷದಿಂದ ಹಣ ವರ್ಗಾವಣೆ ಆಗಿರುವ ಬಗ್ಗೆಯೂ ಎಸ್‌ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆ ಆಳಕ್ಕೆ ಇಳಿಯುತ್ತಿದ್ದಂತೆ ಪ್ರಕರಣದಲ್ಲಿ ಇನ್ನಷ್ಟು ಮಂದಿ ಹಣಕಾಸಿನ ನೆರವು ನೀಡಿರುವ ಬಗ್ಗೆಯೂ ಮಾಹಿತಿ ಸಿಕ್ಕಿದ್ದು, ಅವರಿಗೂ ಎಸ್‌ಐಟಿ ನೋಟಿಸ್ ನೀಡುವ ಸಾಧ್ಯತೆಗಳಿವೆ. ಈಗಾಗಲೇ ಷಡ್ಯಂತ್ರದ ಬಗ್ಗೆ ಹಲವರ ಪಾತ್ರದ ಬಗ್ಗೆ ಆರೋಪಗಳು ಕೇಳಿಬರುತ್ತಿದ್ದು, ಇದುವರೆಗೂ ಯಾರನ್ನೂ ಬಂಧಿಸಿಲ್ಲ.




