ಹಾಸನ: ಹಾಸನ ನೂತನ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರ ಸ್ವೀಕರಿಸಿದರು. ನಂತರ ಮಾತನಾಡಿದ ಅವರು ನಮ್ಮ ತಂದೆ ತಾಯಿ ಅವರ ಉಪಸ್ಥಿತಿಯಲ್ಲಿ ಉನ್ನತ ಹುದ್ದೆಯ ಅಧಿಕಾರ ಸ್ವೀಕರಿಸಿರುವುದು ತುಂಬ ಸಂತೋಷ ತಂದಿದೆ ಎಂದರು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ತಂದೆ ಅವರಿಂದ ಪೆನ್ನು ಪಡೆದು ಸಿ.ಟಿ.ಸಿ.ಗೆ ಸಹಿ ಮಾಡಿದರು. ಮಗಳು ಉನ್ನತ ಹುದ್ದೆಗೇರುವುದು ನಮ್ಮ ತಂದೆ ಅವರ ಕನಸ್ಸಾಗಿತ್ತು ಎಂದು ಸಂತಸ ವ್ಯಕ್ತಪಡಿಸಿದರು.
ಇದಕ್ಕೂ ಮುನ್ನ ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿದ ಲತಾ ಕುಮಾರಿ ಶ್ರೀ ಸಿದ್ದೇಶ್ವರ ಸ್ವಾಮಿ ದೇವರ ದರ್ಶನ ಪಡೆದರು.
ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ನೂತನ ಜಿಲ್ಲಾಧಿಕಾರಿ ಲತಾ ಕುಮಾರಿ ಅವರನ್ನು ಕಚೇರಿಯಲ್ಲಿ ಸ್ವಾಗತಿಸಿದರು.







