ಬೆಂಗಳೂರು: ಲೈಂಗಿಕ ಕಿರುಕುಳ ಆರೋಪದ ಸುಳಿಯಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಕಾನೂನು ತನ್ನ ಕ್ರಮ ಜರುಗಿಸಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಕುರಿತು ಇದೇ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಅವರು, ಈ ವಿಷಯ ಇಟ್ಟುಕೊಂಡು ತಮ್ಮ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ ನಡೆದಿದೆ ಎಂದು ಆಪಾದಿಸಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ಆರೋಪ ಕೇಳಿಬಂದಿದೆ. ಒಂದು ವೇಳೆ ಅವರು ತಪ್ಪು ಮಾಡಿದ್ದರೆ ಕಾನೂನು ರೀತಿ ಶಿಕ್ಷೆಯಾಗಲಿ ಎಂದು ಹೇಳಿದರು.
ಈ ವಿಷಯಕ್ಕೆ ಸಂಬಂಧಿಸಿದಂತೆ ತಾವು ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಜೂನ್ 4 ರ ನಂತರ ಈ ಕುರಿತಂತೆ ವಿವರವಾಗಿ ಮಾತನಾಡುತ್ತೇನೆ ಈಗ ಇದಕ್ಕೆ ಸಂಬಂಧಿಸಿದ ಕುಮಾರಸ್ವಾಮಿ ಎಲ್ಲವನ್ನೂ ವಿವರಿಸಿದ್ದಾರೆ ಎಂದರು.
ಮಾಜಿ ಸಚಿವ ಎಚ್.ರೇವಣ್ಣ ಅವರ ಮೇಲೆ ಮಾಡಿರುವ ಆರೋಪಗಳು ಆಧಾರರಹಿತವಾಗಿದ್ದು, ಆ ವಿಚಾರ ನ್ಯಾಯಾಲಯದ ಮುಂದೆ ಇರುವುದರಿಂದ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ನಮ್ಮ ಕುಟುಂಬಕ್ಕೆ ಹಿನ್ನಡೆ ಮಾಡಲು ಈ ಪ್ರಕರಣದಲ್ಲಿ ಬಹಳ ಜನರಿರುವುದು ನಿಜ. ಆದರೆ ಅವರ ಹೆಸರನ್ನು ಬಹಿರಂಗ ಪಡಿಸುವುದಿಲ್ಲ.ಕುಮಾರಸ್ವಾಮಿಯವರು ಆರೋಪದ ಬಗ್ಗೆ ಏನು ಮಾಡಬೇಕೆಂಬುದನ್ನು ಈಗಾಗಲೇ ಹೇಳಿದ್ದಾರೆ ಎಂದರು.
ಪ್ರಜ್ವಲ್ ರೇವಣ್ಣ ಅವರ ಮೇಲೆ ಆರೋಪ ಕೇಳಿಬಂದ ಕೂಡಲೇ ಕುಮಾರಸ್ವಾಮಿಯವರು ಯಾವುದೇ ಚ್ಯುತಿಯಿಲ್ಲದ ರೀತಿಯಲ್ಲಿ ಸಂಬಂಧಪಟ್ಟವರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಅವರನ್ನು ಸೇರಿದಂತೆ ಸಂಬಂಧಪಟ್ಟ ಎಲ್ಲರ ಮೇಲೂ ಕ್ರಮ ತೆಗೆದುಕೊಳ್ಳಿ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ ಎಂದರು.
ವಕೀಲ ದೇವರಾಜೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲೆ ಮಾಡಿರುವ ಆರೋಪ ಸೇರಿದಂತೆ ಎಲ್ಲದಕ್ಕೂ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದಾರೆ. ದೇವರಾಜೇಗೌಡ ಏನು ಹೇಳಿದ್ದಾರೆ ಎಂಬುದನ್ನು ಮಾಧ್ಯಮಗಳ ಮೂಲಕ ನೋಡಿದ್ದೇವೆ. ಅವರ ಹೇಳಿಕೆಗೆ ನಾವು ಪ್ರತಿಕ್ರಿಯೆ ನೀಡುವುದಿಲ್ಲ. ಎಲ್ಲದಕ್ಕೂ ಕುಮಾರಸ್ವಾಮಿಯವರೇ ಪ್ರತಿಕ್ರಿಯಿಸುತ್ತಿದ್ದಾರೆ ಎಂದರು.




