ಬೆಳಗಾವಿ: ರಾಜ್ಯ ಸರ್ಕಾರದ ಭಾಗವಾಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಿಂದುಳಿದ ವರ್ಗಗಳ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯ ನಡೆಸಿದ ಹೋರಾಟದಲ್ಲಿ ಪಾಲ್ಗೊಳ್ಳುವ ಮೂಲಕ ಗಮನ ಸೆಳೆದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ನಿಲುವನ್ನು ಸಮರ್ಥಿಸಿಕೊಂಡರು. ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ನಾನು ಎಂದಿಗೂ ಸಮುದಾಯದ ಪರ ನಿಲ್ಲುತ್ತೇನೆ ಘೋಷಿಸಿದರು.
ಸಮಾಜ ಇದ್ದರೆ ನಾವೆಲ್ಲ ಇರುತ್ತೇವೆ. ಮುಖಂಡರಿಗೆ ಎಲ್ಲ ವಿಚಾರ ಹೇಳಿದ್ದೇನೆ. ಸರಕಾರ ಯಾವುದೇ ಇರಲಿ, ಪಂಚಮಸಾಲಿ ಸಮಾಜದ ಬಹಳಷ್ಟು ಜನ ಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ. ಸಮಾಜಕ್ಕೆ ನ್ಯಾಯ ಸಿಗಬೇಕು. ಹಿಂದೆಯೂ ಇದೇ ಧಾಟಿಯಲ್ಲಿ ಮಾತನಾಡಿದ್ದೇನೆ. ಇಂದೂ ಅದೇ ದಾಟಿಯಲ್ಲಿ ಮಾತನಾಡುತ್ತೇನೆ ಎಂದರು.
ಸಮಾಜದ ಮಗಳಾಗಿ ಹೇಳುವೆ, ನನ್ನ ಸಮಾಜಕ್ಕೆ ನ್ಯಾಯ ಸಿಗಬೇಕು. ಮೀಸಲಾತಿ ವಿಚಾರವಾಗಿ ಪದೇಪದೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಸಮಾಜ ಹೇಳುವ ದಿಕ್ಕಿನಲ್ಲೇ ನಾನೂ ಸಾಗುತ್ತೇನೆ. 2 ಎ ಮೀಸಲಾತಿ ಸಿಗಲಿ, ಖಂಡಿತ ಹೋರಾಟಕ್ಕೆ ಜಯ ಸಿಗುತ್ತದೆ ಎಂದರು.
ಈ ವೇಳೆ ಶಾಸಕರಾದ ಬಾಬಾ ಸಾಹೇಬ್ ಪಾಟೀಲ್, ಮಾಜಿ ಸಚಿವರಾದ ಎ.ಬಿ.ಪಾಟೀಲ್, ಶಶಿಕಾಂತ್ ನಾಯ್ಕ್, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಸಿ.ಸಿ.ಪಾಟೀಲ್, ಶಶಿಕಲಾ ಜೊಲ್ಲೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ಡಾ.ಮಹಾಂತೇಶ್ ಕಡಾಡಿ, ಮಾಜಿ ಶಾಸಕ ವಿ.ಆಯ್.ಪಾಟೀಲ್, ಮಹಾಂತೇಶ್ ಮತ್ತಿಕೊಪ್ಪ ಮತ್ತಿತರರು ಹಾಜರಿದ್ದರು.




