ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ವಿದ್ಯಮಾನಗಳು ಮತ್ತೊಮ್ಮೆ ಚುರುಕು 

2 years ago

ಬೆಂಗಳೂರು: ನಾಯಕತ್ವ ಬದಲಾವಣೆ ಕುರಿತಂತೆ ಕಾಂಗ್ರೆಸ್ ನಲ್ಲಿ ಕೆಲವು ದಿನಗಳ ಕಾಲದಿಂದ ತಣ್ಣಗಾಗಿದ್ದ ವಿದ್ಯಮಾನಗಳು ಇದೀಗ ಮತ್ತೊಮ್ಮೆ ಚುರುಕಾಗಿವೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ ಕಳೆದ ರಾತ್ರಿ ಭೋಜನ ಕೂಟ ನಡೆಸಿದ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕೆಲವು ಸಚಿವರು ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆ ಇಲ್ಲ ಎಂಬ ಸಂದೇಶವನ್ನು ರವಾನಿಸಬೇಕು ಎಂಬ ನಿರ್ಧಾರಕ್ಕೆ ಬಂದಿದ್ದಾರೆ.

ರಾಜ್ಯ ಬಜೆಟ್ ಅಧಿವೇಶನ ಮುಗಿದ ನಂತರ ನಾಯಕತ್ವ ಬದಲಾವಣೆಯಾಗಲಿದೆ ಎಂದು ಚರ್ಚೆಯಾಗುತ್ತಿದೆ. ನಾಯಕತ್ವ ಹಸ್ತಾಂತರ ಕುರಿತಂತೆ ಹೈಕಮಾಂಡ್ ಜೊತೆ ಒಪ್ಪಂದ ಮಾಡಿಕೊಂಡಿದೆ ಎಂದು ಚರ್ಚೆಯಾಗುತ್ತಿದೆ. ಇದಕ್ಕೆಲ್ಲಾ ಉತ್ತರ ನೀಡಬೇಕಿದೆ. ಈ ಚರ್ಚೆಗಳು ಆಡಳಿತ ಮತ್ತು ಪಕ್ಷ ಸಂಘಟನೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಸಭೆಯಲ್ಲಿದ್ದ ಬಹುತೇಕ ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದರು ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ. 

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ತಮ್ಮ ಅವಧಿ ಪೂರ್ಣಗೊಳಿಸಲಿದ್ದಾರೆ ಎಂದು ಸ್ಪಷ್ಟವಾಗಿ ಹೇಳಬೇಕು. ಹೈಕಮಾಂಡ್ ಅನುಮತಿ ಪಡೆದು ಸಂಪುಟ ವಿಸ್ತರಣೆ ಮಾಡಬೇಕು. ಬಜೆಟ್ ಅಧಿವೇಶನ ಮುಗಿದ ನಂತರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು ಎಂದು ಮೂಲಗಳು ತಿಳಿಸಿವೆ.

Leave a Reply