ಬೆಂಗಳೂರು: ನಾಯಕತ್ವ ಬದಲಾವಣೆ ಎಂಬುದು ಕೇವಲ ರಾಜಕೀಯ ಪ್ರಹಸನವಷ್ಟೇ. ನನಗೆ ಆ ರೀತಿಯ ಮತ್ತೊಂದು ಡ್ರಾಮಾ ಕಂಪನಿ ತೆರೆಯಲು ಇಷ್ಟವಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕ ಅಥವಾ ಮಂತ್ರಿಗಳು ನಾಯಕತ್ವ ಬದಲಾವಣೆ ಅಥವಾ ಅಧಿಕಾರ ಹಸ್ತಾಂತರ ಕುರಿತ ಹೇಳಿಕೆ ನೀಡಿದಾಗ ಅನಗತ್ಯವಾದ ವಿಶ್ಲೇಷಣೆಗಳು ನಡೆಯುತ್ತದೆ. ಅದಕ್ಕಾಗಿಯೇ ಇಂತಹ ಚರ್ಚೆಗಳು ಪದೇಪದೇ ವರದಿಯಾಗುತ್ತಿವೆ. ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದೆಲ್ಲವೂ ಕಪೋಲಕಲ್ಪಿತ. ನಾನು ಅದೇ ರೀತಿಯ ಹೇಳಿಕೆಗಳನ್ನು ನೀಡಲು ಇಷ್ಟಪಡುವುದಿಲ್ಲ ಎಂದರು.
ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ಅಭಿಪ್ರಾಯವನ್ನು ಗೌರವಿಸುವುದಾಗಿ ಸುರ್ಜೇವಾಲ ಹೇಳಿದ್ದಾರೆ. ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿರುತ್ತದೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.




