ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆ ಬಗ್ಗೆ ಶಾಸಕರಿಂದ ಮಾಹಿತಿ ಪಡೆಯುತ್ತಿದ್ದೇವೆ. ಕಾಂಗ್ರೆಸ್ ಸಂಘಟನೆ ಅವರವರ ಕ್ಷೇತ್ರದಲ್ಲಿ ಹೇಗಿದೆ ಎಂಬ ವರದಿ ಪಡೆಯುತ್ತೇನೆ. ಮುಂಚೂಣಿ ಘಟಕಗಳು ಹೇಗೆ ಕೆಲಸ ಮಾಡುತ್ತಿವೆ ಎಂಬ ಬಗ್ಗೆ ಪರಾಮರ್ಶೆ ಮಾಡುತ್ತಿದ್ದೇವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಷ್ಟು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳಾಗುತ್ತಿವೆ ಎಂದೂ ಮಾಹಿತಿ ಪಡೆಯುತ್ತೇವೆ. ಇದರಿಂದ ಸಿಎಂ, ಸಚಿವರಿಗೆ ಮಾಹಿತಿ ನೀಡಲು, ಅರ್ಥ ಮಾಡಿಕೊಳ್ಳಲು ಅನುಕೂಲ ಆಗಲಿದೆ. ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಕೆಲಸಗಳ ಬಗ್ಗೆ ಶಾಸಕರಿಂದ ಮಾಹಿತಿ ಪಡೆಯುತ್ತಿದ್ದೇವೆ. ಸಂಘಟನಾತ್ಮಕ ಚಟುವಟಿಕೆಗಳನ್ನು ಎಐಸಿಸಿ, ಕೆಪಿಸಿಸಿ ಜಂಟಿಯಾಗಿ ಮಾಡಬೇಕಿದೆ ಎಂದರು.
ನಾಯಕತ್ವ ಬದಲಾವಣೆ ಕೇವಲ ಊಹಾಪೋಹ. ಮಾಧ್ಯಮಗಳಲ್ಲಿ ಬರುತ್ತಿರುವುದು ನಿಮ್ಮ ಕಲ್ಪನೆ ಮಾತ್ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಪರಾಜಿತ ಅಭ್ಯರ್ಥಿಗಳನ್ನು ಕೂಡ ಸಭೆಗೆ ಕರೆಯುತ್ತೇವೆ. ಇದು ನಿರಂತರವಾಗಿ ನಡೆಯುವ ಪ್ರಕ್ರಿಯೆ. ಬಳಿಕ ಸಿಎಂ, ಡಿಸಿಎಂ ಜೊತೆಗೂ ಅಭಿವೃದ್ಧಿ ವಿಚಾರವಾಗಿ ಮಾತನಾಡುತ್ತೇವೆ ಎಂದರು.




