ಬೆಳಗಾವಿ: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಹೊಸ ಬೇಡಿಕೆ ಮಂಡಿಸುವ ಮೂಲಕ ವಿವಾದಕ್ಕೆ ಮತ್ತೊಂದು ಆಯಾಮ ನೀಡಿದ್ದಾರೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ನಡೆಯುತ್ತಿದ್ದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಿ ಎಂದು ನೀಡಿದ ಹೇಳಿಕೆಯನ್ನು ಬಲವಾಗಿ ಖಂಡಿಸಿದರು.
ಮಹಾರಾಷ್ಟ್ರದ ಮತಿಹೀನರೊಬ್ಬರು ಒಂದು ಮಾತನ್ನು ಹೇಳಿದ್ದರು. ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಿ ಎಂದಿದ್ದರು. ಹಾಗಾದರೆ ಮುಂಬೈ ಮೇಲೆ ನಮ್ಮ ಹಕ್ಕನ್ನು ಮಂಡನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮಹಾರಾಷ್ಟ್ರ ರಾಜಧಾನಿ ಮುಂಬೈ ಮೇಲೆ ನಮಗೂ ಹಕ್ಕಿದೆ. ಅಲ್ಲಿ ಅನೇಕರು ಕನ್ನಡಿಗರಿದ್ದಾರೆ. ಹೀಗಾಗಿ ಮುಂಬೈಯನ್ನು ಕರ್ನಾಟಕಕ್ಕೆ ಬಿಟ್ಟು ಬಿಡಿ, ಸದ್ಯಕ್ಕೆ ಅದನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಣೆ ಮಾಡಬೇಕಿದೆ ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ಈ ಕುರಿತಂತೆ ನಿರ್ಣಯವನ್ನು ಅಂಗೀಕರಿಸಿ, ಕೇಂದ್ರ ಸರ್ಕಾರಕ್ಕೆ ಈ ಮನವಿ ಮಾಡಬೇಕು. ಮುಂಬೈಯನ್ನು ಕರ್ನಾಟಕಕ್ಕೆ ಬಿಟ್ಟು ಬಿಡಿ ಎಂದು ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸೋಣ. ಮುಂಬೈ ಬಗ್ಗೆ ನಮಗೂ ಹಕ್ಕು ಇದೆ ಎಂದು ಪ್ರತಿಪಾದಿಸಬೇಕಿದೆ. ಆಗ ಇಂತಹ ತಂಟೆಗಳಿಗೆ ತಕ್ಕ ಉತ್ತರ ದೊರಕಲಿದೆ ಎಂದರು.
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ನಾವು ಘೋಷಣೆ ಮಾಡಿದ್ದೇವೆ. ಮಹಾಜನ್ ಆಯೋಗ ವರದಿ ಕೂಡಾ ಒಪ್ಪಿದೆ. ಆದರೂ ಕೆಲವು ಕಿಡಿಗೇಡಿಗಳು ಈ ವಿಷಯವನ್ನು ಪದೇಪದೇ ಪ್ರಸ್ತಾಪಿಸುವ ಮೂಲಕ ಗಡಿ ಪ್ರದೇಶದಲ್ಲಿ ಅಶಾಂತಿ ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಆಪಾದಿಸಿದರು.




