ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಉಪನ್ಯಾಸ ಮಾಲಿಕೆ

1 year ago

ಸಾರ್ವಜನಿಕ ಆಡಳಿತ ಮತ್ತು ಲೋಕಾಯುಕ್ತ ಕಾಯ್ದೆ 1984ರ ಅಡಿಯಲ್ಲಿ ವಕೀಲರ ಪಾತ್ರ ಕುರಿತು ಕಾರ್ಯಕ್ರಮ

ದಾವಣಗೆರೆ: ಕರ್ನಾಟಕ ಲೋಕಾಯುಕ್ತ, ಜಿಲ್ಲಾ ವಕೀಲರ ಸಂಘ(ರಿ), ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 23 ರಂದು ಬೆಳಿಗ್ಗೆ 11 ಗಂಟೆಗೆ ನಗರದ ವಕೀಲರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಅಂಗವಾಗಿ ಉಪನ್ಯಾಸ ಮಾಲಿಕೆ, ಸಾರ್ವಜನಿಕ ಆಡಳಿತ ಮತ್ತು ಲೋಕಾಯುಕ್ತ ಕಾಯ್ದೆ 1984ರ ಅಡಿಯಲ್ಲಿ ವಕೀಲರ ಪಾತ್ರ ಕುರಿತು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಉಪ ಲೋಕಾಯುಕ್ತರು ಹಾಗೂ ನ್ಯಾಯಾಮೂರ್ತಿಗಳಾದ ಬಿ.ವೀರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸುವರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಲ್.ಹೆಚ್.ಅರುಣಕುಮಾರ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ವೇಲಾ.ಡಿ.ಕೆ, ಅಪರ ನಿಬಂಧಕರು(ವಿಚಾರಣೆಗಳು-15) ಕೆ.ಎಂ ರಾಜಶೇಖರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ.ಮ.ಕರೆಣ್ಣವರ, ಅಪರ ನಿಬಂಧಕರು (ವಿಚಾರಣೆಗಳು-1) ಅರವಿಂದ.ಎನ್.ವಿ, ಅಪರ ನಿಬಂಧಕರು (ವಿಚಾರಣೆಗಳು-1) ವಿ.ಎನ್ ಮಿಲನ ಭಾಗವಹಿಸಲಿದ್ದಾರೆ.

Leave a Reply