ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಜನ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ವರದಿಯ ಶಿಫಾರಸುಗಳನ್ನು ಸಚಿವ ಸಂಪುಟ ಸಭೆ ಒಪ್ಪಿಕೊಂಡಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲು ತೀರ್ಮಾನಿಸಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸಂಪುಟ ಸಭೆ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಕಾನೂನು ಸಚಿವ ಎಚ್ ಕೆ ಪಾಟೀಲ್, ನ್ಯಾ. ಮೈಕಲ್ ಡಿ ಕುನ್ಹಾ ಅವರ ವರದಿಯಲ್ಲಿ ಕಾಲ್ತುಳಿತಕ್ಕೆ ಆರ್ ಸಿ ಬಿ ಮತ್ತು ಕೆ ಎಸ್ ಸಿ ಎ ಕಾರಣ ಎಂದು ಹೇಳಲಾಗಿದೆ. ಹೀಗಾಗಿ ಅವರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದರು.
ಇಡೀ ಘಟನೆಗೆ ಖಾಸಗಿ ಸಂಸ್ಥೆಗಳು ಮತ್ತು ಸರ್ಕಾರದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ವರದಿಯ ಶಿಫಾರಸು ಸೂಚಿಸಿದೆ. ಅಲ್ಲದೇ, ಸರ್ಕಾರಿ ಅಧಿಕಾರಿಗಳ ವಿರುದ್ಧ ಇಲಾಖಾವಾರು ವಿಚಾರಣೆ ನಡೆಸಲು ಒಳಾಡಳಿತ ಇಲಾಖೆಗೆ ಸೂಚಿಸಲಾಗುವುದು ಎಂದರು.
ವರದಿಯ ಪ್ರಕಾರ, ರಾಯಲ್ ಚಾಲೆಂಜರ್ಸ್ ಪ್ರೈವೇಟ್ ಲಿಮಿಟೆಡ್ / ಆರ್‌ಸಿಬಿ, ಡಿಎನ್‌ಎ ಎಂಟರ್‌ಟೇನ್‌ಮೆಂಟ್, ನೆಟ್‌ವೆರ್ಕ್, ಕೆಎಸ್‌ಸಿಎ ಮತ್ತು ಅದರ ಅಧ್ಯಕ್ಷ ರಘುರಾಮ್ ಭಟ್, ಮಾಜಿ ಕಾರ್ಯದರ್ಶಿ ಎಸ್.ಶಂಕರ್, ಮಾಜಿ ಖಜಾಂಚಿ ಇ.ಎಸ್.ಜಯರಾಮ್, ಆರ್‌ಸಿಎಸ್‌ಪಿಎಲ್‌ನ ಉಪಾಧ್ಯಕ್ಷ ರಾಜೇಶ್ ಮೆನನ್, ಡಿಎನ್‌ಎ ಎಂಟರ್‌ಟೇನ್‌ಮೆಂಟ್‌ನ ವ್ಯವಸ್ಥಾಪಕ ನಿರ್ದೇಶಕ ಟಿ. ವೆಂಕಟ ವರ್ಧನ್, ಉಪಾಧ್ಯಕ್ಷ ಸುನಿಲ್ ಮಾಥುರ್,
ಬೆಂಗಳೂರು ನಗರದ ಈ ಹಿಂದಿನ ಪೊಲೀಸ್ ಕಮಿಷನರ್ ಬಿ.ದಯಾನಂದ, ಹಿಂದಿನ ಹೆಚ್ಚುವರಿ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ವಿಕಾಸ್, ಕೇಂದ್ರ ವಿಭಾಗದ ಹಿಂದಿನ ಡಿಸಿಪಿ ಶೇಖರ್ ಎಚ್.ಟೆಕ್ಕಣ್ಣನವರ್, ಕಬ್ಬನ್ ಪಾರ್ಕ್ ಉಪವಿಭಾಗದ ಹಿಂದಿನ ಎಸಿಪಿ ಸಿ.ಬಾಲಕೃಷ್ಣ, ಕಬ್ಬನ್ ಪಾರ್ಕ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಗಿರೀಶ್ ಎ.ಕೆ. ಈ ದುರಂತಕ್ಕೆ ಕಾರಣರು ಎಂದು ಗುರುತಿಸಲಾಗಿದೆ.




