ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಯಾವುದೇ ಲೋಪವಿಲ್ಲದೆ ನಡೆಯಬೇಕು. ಇದರಲ್ಲಿ ಯಾರಾದರೂ ನಿರ್ಲಕ್ಷ್ಯ ವಹಿಸಿದರೆ ಅಂತಹ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ರಾಜ್ಯಾದ್ಯಂತ ನಡೆಯುತ್ತಿರುವ ಸಮೀಕ್ಷೆಯಲ್ಲಿ ಹಲವು ಲೋಪಗಳಿವೆ. ನಿರೀಕ್ಷಿತ ವೇಗದಲ್ಲಿ ಸಮೀಕ್ಷೆ ನಡೆಯುತ್ತಿಲ್ಲ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಿರಿಯ ಸಚಿವರೊಂದಿಗೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಉನ್ನತ ಮಟ್ಟದ ಸಭೆ ನಡೆಸಿದರು.
ಸಭೆಯಲ್ಲಿ ಜಿಲ್ಲಾವಾರು ಸಮೀಕ್ಷೆಯ ಮಾಹಿತಿ ಪಡೆದುಕೊಂಡ ಅವರು, ಸಮೀಕ್ಷೆಯಲ್ಲಿ ತೊಡಗಿರುವ ಅಧಿಕಾರಿಗಳು ಯಾವುದೇ ಲೋಪಗಳಿಗೆ ಅವಕಾಶವಿಲ್ಲದಂತೆ ಎಚ್ಚರಿಕೆವಹಿಸಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.
ರಾಜ್ಯ ಸರ್ಕಾರ ಸಮೀಕ್ಷೆಗೆ ನೀಡಿರುವ ಗುರಿಯೊಳಗೆ ಸಂಪೂರ್ಣ ಪ್ರಗತಿ ಸಾಧಿಸಬೇಕು. ಸಮೀಕ್ಷೆಗೆ ನಿಯೋಜಿಸಿರುವ ಅಧಿಕಾರಿಗಳು ಸಕಾಲಣವಿಲ್ಲದೆ ಗೈರು ಹಾಜರಾದರೆ ಅಂಥವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು
ಸಭೆಯಲ್ಲಿ ಕೈಗೊಂಡ ನಿರ್ಧಾರಗಳು:
• ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.
• ಸಮೀಕ್ಷೆ ಕಾರ್ಯಕ್ಕೆ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಸಮೀಕ್ಷೆ ಕಾರ್ಯವನ್ನು ಎಲ್ಲಾ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು.
• ರಾಜ್ಯದಲ್ಲಿ ಒಟ್ಟು 1,43,81,702 ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ನಡೆಸಬೇಕಾಗಿದ್ದು, ಇದುವರೆಗೆ 2,76,016 ಕುಟುಂಬಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲಾಗಿದೆ.
• ಸಮೀಕ್ಷೆ ಕಾರ್ಯಕ್ಕೆ ಒಟ್ಟು 1,20,728 ಗಣತಿದಾರರನ್ನು ನಿಯೋಜಿಸಲಾಗಿದೆ. ಒಟ್ಟು 1,22,085 ಗಣತಿ ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಅಕ್ಟೋಬರ್ 7ರ ಒಳಗಾಗಿ ಗಣತಿ ಕಾರ್ಯ ಪೂರ್ಣಗೊಳ್ಳಬೇಕು.
• ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಶಿಕ್ಷಕರು ತಮಗೆ ವಹಿಸಲಾಗಿರುವ ಕಾರ್ಯವನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಯಾವುದೇ ಶಿಕ್ಷಕರು ಗಣತಿ ಕಾರ್ಯಕ್ಕೆ ಅಸಹಕಾರ ತೋರಿಸಬಾರದು. ಇದು ಸರ್ಕಾರಿ ಕೆಲಸವಾಗಿದ್ದು, ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಬಾರದು. ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕ್ರಮ ಕೈಗೊಳ್ಳಬೇಕು.
• ಶಿಕ್ಷಕರಿಗೆ ಗೌರವಧನದ ಬಗ್ಗೆ ಯಾವುದೇ ಅನುಮಾನ ಬೇಡ. ಈಗಾಗಲೇ ಗೌರವಧನವನ್ನು ಬಿಡುಗಡೆ ಮಾಡಿದ್ದೇವೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಗಣತಿ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು.
• ಇದು ಕೇವಲ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಮೀಕ್ಷೆಯಲ್ಲ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನಿಗದಿತ ಗುರಿಯ ಪ್ರಗತಿ ಬಗ್ಗೆ ಪ್ರತಿ ದಿನ ಪರಿಶೀಲನೆ ನಡೆಸಬೇಕು. ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.
• ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ನಿಧಾನಗತಿಯಲ್ಲಿದ್ದು, ಚುರುಕುಗೊಳಿಸಬೇಕು. ಅಗತ್ಯವಿರುವ ಕಡೆ ಅನುದಾನಿತ ಶಾಲೆಗಳ ಶಿಕ್ಷಕರ ಸೇವೆಯನ್ನು ಪಡೆದುಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೂ ಈ ಕುರಿತು ಸಂಪರ್ಕದಲ್ಲಿರಬೇಕು.
• ಸಮೀಕ್ಷೆ ಕಾರ್ಯದ ಮೇಲ್ವಿಚಾರಣೆ ನಡೆಸಲು ಪ್ರತಿ ತಾಲೂಕಿಗೆ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ.
• ಜಿಲ್ಲಾ ಮಟ್ಟದಲ್ಲಿ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದರೆ ಸ್ಥಳೀಯವಾಗಿ ಸಮಸ್ಯೆ ಬಗೆಹರಿಸಲು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳಲ್ಲಿರುವ ಐಟಿ ತಂತ್ರಜ್ಞರ ನೆರವನ್ನು ಪಡೆದುಕೊಳ್ಳಬೇಕು.
• ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯ ಇಂದಿನಿಂದ ಆರಂಭವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 50 ಲಕ್ಷ ಮನೆಗಳಿದ್ದು, ಆದಷ್ಟು ಬೇಗನೆ ಗಣತಿ ಕಾರ್ಯವನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದ ಪ್ರತಿಯೊಂದು ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಬೇಕು. ಯಾವುದೇ ಕುಟುಂಬ ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು.
• ಗುಡ್ಡಗಾಡು ಪ್ರದೇಶಗಳ ವ್ಯಾಪ್ತಿಯಲ್ಲಿ ಶಾಲೆಗಳಲ್ಲಿ ಸಮೀಕ್ಷೆ ಕೇಂದ್ರಗಳನ್ನು ಆರಂಭಿಸಲು ಅವಕಾಶ ನೀಡಲಾಗಿದೆ. ಜನರು ಕೇಂದ್ರಕ್ಕೆ ಬಂದು ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಳ್ಳಬಹುದಾಗಿದೆ. ಆನ್‌ಲೈನ್ ಮೂಲಕ ಸಹ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು. ಸಮೀಕ್ಷೆ ಸಂದರ್ಭದಲ್ಲಿ ಮನೆಗಳಿಗೆ ಬೀಗ ಹಾಕಿದ್ದರೆ, ಅಂತಹ ಮನೆಗಳಲ್ಲೂ ಗಣತಿ ಕಾರ್ಯವನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು.




