ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬಳ್ಳಾರಿ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ಕಾನೂನು ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.30ರ ವರೆಗೆ ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಬಿ.ಮಲ್ಲಿಕಾರ್ಜುನ ತಿಳಿಸಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ಪ್ರಸಕ್ತ ಸಾಲಿನ ಆಡಳಿತ ನ್ಯಾಯಾಧೀಕರಣದಲ್ಲಿ ಎರಡು ವರ್ಷಗಳ ವೃತ್ತಿ ತರಬೇತಿಯಲ್ಲಿ ಶಿಷ್ಯವೇತನ ನೀಡಲಾಗುತ್ತದೆ. ಅರ್ಹ ಪದವೀಧರರು ಇಲಾಖೆಯ ವೆಬ್ಸೈಟ್ www.sw.kar.nic.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕೋಟೆ ಪ್ರದೇಶದ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಅಥವಾ ದೂ:08392267932 ಗೆ ಸಂಪರ್ಕಿಸಬಹುದು.




