ಬೆಂಗಳೂರು: ಲೋಕಸಭೆ ಚುನಾವಣೆಯ ಮತದಾನ ಪೂರ್ಣಗೊಂಡ ಬೆನ್ನಲ್ಲೇ ವಿಧಾನಪರಿಷತ್ನ ಆರು ಸದಸ್ಯ ಸ್ಥಾನಗಳಿಗೆ ಚುನಾವಣೆ ಎದುರಾಗಿದೆ. ಇದಕ್ಕಾಗಿ ಇಂದು ಅಧಿಸೂಚನೆ ಹೊರಬೀಳಲಿದ್ದು, ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಆಯನೂರು ಮಂಜುನಾಥ್ ಮತ್ತು ಮರಿತಿಬ್ಬೇಗೌಡ ಅವರ ರಾಜೀನಾಮೆಯಿಂದ ತೆರವಾಗಿರುವ ಎರಡು ಸ್ಥಾನ ಹಾಗೂ ಡಾ.ಚಂದ್ರಶೇಖರ ಬಿ.ಪಾಟೀಲ, ಎ.ದೇವೇಗೌಡ, ಡಾ.ವೈ.ಎ.ನಾರಾಯಣಸ್ವಾಮಿ, ಎಸ್.ಎಲ್.ಬೋಜೇಗೌಡ ಅವರ ನಿವೃತ್ತಿಯಿಂದ ತೆರವಾಗುವ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.
ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರ, ಕರ್ನಾಟಕ ನೈರುತ್ಯ ಪದವೀಧರ, ಬೆಂಗಳೂರು ಪದವೀಧರ, ಕರ್ನಾಟಕ ಆಗ್ನೇಯ ಶಿಕ್ಷಕರ, ಕರ್ನಾಟಕ ನೈರುತ್ಯ ಶಿಕ್ಷಕರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಭಾರತದ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.
ಇಂದಿನಿಂದ ಮೇ 16ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಮೇ 17ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮೇ 20ರಂದು ನಾಮಪತ್ರ ವಾಪಸ್ ಪಡೆಯಲು ಕಡೆಯ ದಿನವಾಗಿದೆ. ಜೂ.3ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಜೂ.6ರಂದು ಮತ ಎಣಿಕೆ ನಡೆಯಲಿದೆ.



