“ಅಂಬೇಡ್ಕರ್ ಅವರ ಹೆಸರನ್ನು ಪದೇ ಪದೇ ಬಳಸುವುದು ಕೆಲವರಿಗೆ ಶೋಕಿಯಾಗಿಬಿಟ್ಟಿದೆ. ಅಂಬೇಡ್ಕರ್ ಅವರ ಹೆಸರನ್ನು ಬಳಸಿದಷ್ಟು ಏನಾದರೂ ದೇವರ ಹೆಸರನ್ನು ಬಳಸಿದ್ದರೆ ಇಷ್ಟು ಹೊತ್ತಿಗೆ ಏಳು ಜನ್ಮದ ಪುಣ್ಯ ಬರುತ್ತಿತ್ತು” ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ರಾಜ್ಯ ಸಭೆಯಲ್ಲಿ ಹೇಳಿದ್ದು ಅವರ ಈ ಅಸೂಕ್ಷ್ಮವಾದ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ಭಾರತದ ಇತಿಹಾಸದಲ್ಲಿ ಅಸ್ಪೃಶ್ಯ ಸಮುದಾಯಗಳಿಗೆ ಇದ್ದ ಪರಿಸ್ಥಿತಿಯನ್ನು ನೆನಪಿಸಿಕೊಂಡರೆ ವಿಪರೀತ ಅವಮಾನ ದೌರ್ಜನ್ಯಕ್ಕೆ ಒಳಗಾಗಿದ್ದ ಅವರನ್ನು ಯಾವ ದೇವರೂ ಕೂಡಾ ರಕ್ಷಣೆ ಮಾಡಿದ ಉದಾಹರಣೆ ಇಲ್ಲ.
ಆದರೆ ಅಸ್ಪೃಶ್ಯರು, ಮಹಿಳೆಯರು ಮತ್ತು ಶೋಷಿತರ ಬದುಕನ್ನು ತನ್ನ ತ್ಯಾಗ, ಅಧ್ಯಯನ, ಬದ್ಧತೆ ಮತ್ತು ಮಹಾಲೋಕದೃಷ್ಟಿಯ ಮೂಲಕ ಪ್ರತಿದಿನವೂ ರಕ್ಷಣೆ ಮಾಡುತ್ತಿರುವ ನಿಜವಾದ ಶಕ್ತಿ ಯಾವುದಾದರೂ ಇದ್ದರೆ ಅದು ಬಾಬಾ ಸಾಹೇಬರು ಮತ್ತವರ ಸಂವಿಧಾನ ಎಂಬುದನ್ನು ನಾನು ಎದೆ ಕಟ್ಟಿಕೊಂಡು ಹೇಳುತ್ತೇನೆ.
ಭಾರತದ ಸಂದರ್ಭದಲ್ಲಿ ಅಸ್ಪೃಶ್ಯತೆ ಅನುಭವಿಸಿದ ನಮ್ಮ ಜನರು, ಇಲ್ಲಿನ ಮಹಿಳೆಯರು ಮತ್ತು ಶೋಷಿತ ವರ್ಗಗಳು ಅಂಬೇಡ್ಕರ್ ಅವರನ್ನು ಬಿಟ್ಟು ಅಮಿತ್ ಶಾ ಅವರ ದೇವರ ಹೆಸರನ್ನು ಹೇಳುತ್ತಾ ಕೂತಿದ್ದರೆ ಇಷ್ಟೊತ್ತಿಗೆ ಅವರೆಲ್ಲರೂ ದೇವರ ಪಾದ ಸೇರಬೇಕಾಗಿತ್ತು.
ಹೀಗಾಗಿ ಪುಣ್ಯ ಗಿಣ್ಯ ಎಂದು ಹೇಳುತ್ತಾ ಸಮಾಜಕ್ಕೆ ಕಂಟಕಪ್ರಾಯವಾದ ಮೌಢ್ಯತೆಯನ್ನು ಆಚರಿಸುವುದಕ್ಕಾಗಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೀನ ಧೈರ್ಯ ತೋರುತ್ತಿರುವ ಅಮಿತ್ ಷಾ ಅವರು ದೇಶದ ಮುಂದೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಈ ಮೂಲಕ ನಾನು ಆಗ್ರಹಿಸುತ್ತೇನೆ.!
ಜೊತೆಗೆ ” ಯಾವ ಧರ್ಮ ಅಥವಾ ದೇವರು ನಮ್ಮನ್ನು ರಕ್ಷಣೆ ಮಾಡುವುದಿಲ್ಲ, ಬದಲಿಗೆ ಶಿಕ್ಷಣ, ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವವೇ ನಮ್ಮ ಬದುಕನ್ನು ಬದಲಿಸುವ ಕೀಲಿಕೈ” ಎಂಬ ಬಾಬಾ ಸಾಹೇಬರ ಮಾತನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳುತ್ತೇನೆ
– ಡಾ. ಎಚ್ ಸಿ ಮಹದೇವಪ್ಪ, ಸಮಾಜ ಕಲ್ಯಾಣ ಸಚಿವ




