ಬೆಂಗಳೂರು: ಕುಮಾರಸ್ವಾಮಿ ಅವರು ರಾಜಕಾರಣ, ಬೇರೆ ಮಾತು ಎಲ್ಲವನ್ನು ಬಿಟ್ಟು ರಾಜ್ಯದಲ್ಲಿ 50 ಸಾವಿರದಿಂದ 1 ಲಕ್ಷ ಜನರಿಗೆ ಉದ್ಯೋಗ ನೀಡುವಂತಹ ಕೆಲಸ ಮಾಡಲಿ. ಕಾಂಗ್ರೆಸ್ ಸರ್ಕಾರ ಅವರಿಗೆ ಬೇಕಾದಂತಹ ಸಹಕಾರ ನೀಡುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸದಾಶಿವನಗರದಲ್ಲಿ ಗೃಹಸಚಿವ ಡಾ.ಜಿ. ಪರಮೇಶ್ವರ ಅವರೊಟ್ಟಿಗೆ ಚರ್ಚೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಗೆ ಮೋದಿ ಅವರು ಉಕ್ಕು, ಕೈಗಾರಿಕೆ ಎನ್ನುವ ದೊಡ್ಡ ಹಾಗೂ ಉತ್ತಮ ಖಾತೆ ಕೊಟ್ಟಿದ್ದಾರೆ. ಅವರಿಗೆ ಸಿಕ್ಕಿರುವ ಒಳ್ಳೇ ಅವಕಾಶ ಬಳಸಿಕೊಳ್ಳಲಿ ಎಂದ್ರು.
ಯೋಗಕ್ಕಿಂತ ಯೋಗಕ್ಷೇಮ ಮುಖ್ಯವಾದುದು. ಹಾಸನ, ಬೆಂಗಳೂರು, ಮಂಡ್ಯ, ಬೀದರ್, ಕಲಬುರ್ಗಿ ಸೇರಿದಂತೆ ಇತರೇ ಭಾಗಗಳಿಗೆ ಉತ್ತಮ ಕೆಲಸ ಮಾಡಿ, ಏನಾದರೂ ಸಾಕ್ಷಿ ಬಿಟ್ಟು ಹೋಗಲಿ. ರಾಜಕೀಯ ಇದ್ದಿದ್ದೇ. ಏಕೆ ಇಂತಹ ಅವಕಾಶವನ್ನು ಕಳೆದುಕೊಳ್ಳುತ್ತಾ ಇದ್ದಾರೆ ಎಂದರು.
ಇಂದಿನ ಪರಮೇಶ್ವರ್ ಭೇಟಿ ಕುರಿತ ಪತ್ರಕರ್ತರ ಪ್ರಶ್ನೆಗೆ ಗ್ರಾಂ ಆಗಿ ಉತ್ತರ ನೀಡಿದ ಅವರು, ನಿಮಗೆ ರಾಜಕೀಯ ಬಿಟ್ಟು ಬೇರೆ ವಿಚಾರಗಳು ಕಾಣಿಸುವುದಿಲ್ಲವೇ? ಜನರು ನಮ್ಮ ಮೇಲೆ ವಿಶ್ವಾಸವನ್ನಿಟ್ಟು ಅಧಿಕಾರ ಕೊಟ್ಟಿದ್ದಾರೆ, ಅವರ ಆಶೋತ್ತರಗಳನ್ನು ಈಡೇರಿಸಬೇಕು ಎಂದರು.
ನಾವೆಲ್ಲಾ ಪ್ರತಿದಿನ ರಾಜಕೀಯ ಮಾಡುತ್ತಲೇ ಇರುತ್ತೇವೆ. ಅಭಿವೃದ್ದಿಯಿದ್ದರೇ ತಾನೇ ರಾಜಕೀಯ. ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಎತ್ತಿನಹೊಳೆ ಕೆಲಸ ಮುಗಿಸಬೇಕು, ಪ್ರಣಾಳಿಕೆಗಳಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಬೇಕು. ಪ್ರತಿದಿನ ಸಮಯ ಓಡುತ್ತಿರುತ್ತದೆ ಎಂದರು.
ನಾವು 136 ಕಾಂಗ್ರೆಸ್ ಶಾಸಕರು ಒಟ್ಟಿಗೆ ಇದ್ದೇವೆ. ಇಲ್ಲಿ ಚರ್ಚೆ ಮಾಡುವಾಗ ಅಧಿಕಾರಿಗಳು ಬೇಕಾಗಿಲ್ಲ. ನಾಯಕರ ಹಿಂದೆ ಅಧಿಕಾರಿಗಳು ಬೇಕಾಗಿಲ್ಲ. ನಾವು ಆಲೋಚಿಸುತ್ತೇವೆ, ಚರ್ಚೆ ಮಾಡುತ್ತೇವೆ, ಅಭಿಪ್ರಾಯ ಕೇಳುತ್ತೇವೆ. ಮಾತನಾಡುವವರು ಹಾಗೂ ತೀರ್ಮಾನಿಸುವವರು ಒಬ್ಬರೇ ಎಂದರು.
ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ದ ಕುಮಾರಸ್ವಾಮಿ ಅವರ ಆರೋಪದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ತನಿಖೆ ಮಾಡುವವರು ಅವರು, ತನಿಖೆಗೆ ಒಳಗಾಗುವವರು ಅವರು. ಅದಕ್ಕೂ ನನಗೂ ಸಂಬಂಧವಿಲ್ಲ ಎಂದರು.
ಸರ್ಕಾರ ಬೀಳಿಸಲು 1 ಸಾವಿರ ಕೋಟಿ ಮೀಸಲಿಡಲಾಗಿದೆ ಎನ್ನುವ ಯತ್ನಾಳ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಇದರ ಬಗ್ಗೆ ಈಗಾಗಲೇ ಹೈಕಮಾಂಡ್ ಗಮನಕ್ಕೆ ತರಲಾಗಿದೆ. ಪಕ್ಷ ಹಾಗೂ ಸರ್ಕಾರ ಉರುಳಿಸಲು ಈ ಕೆಲಸ ಮಾಡಲಾಗುತ್ತಿದೆ. ನಮ್ಮ ಕಾನೂನು ಸಲಹೆಗಾರರ ಬಳಿ ಚರ್ಚೆ ನಡೆಸಲಾಗುವುದು. ಈ ಕೃತ್ಯ ಐಟಿಯವರಿಂದ ತನಿಖೆಗೆ ಒಳಗಾಗಬೇಕು ಎಂದರು.
ಮುಂದಿನ 2025 ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರನ್ನು ಹರಿಸಲು ಪ್ರಯತ್ನ ಮಾಡಲಾಗುವುದು. ಈಗಾಗಲೇ ಎತ್ತಿನಹೊಳೆ ನೀರನ್ನು ಮೇಲಕ್ಕೆ ಎತ್ತಿ ಸಂಗ್ರಹ ಮಾಡಲಾಗಿದೆ. ತುಮಕೂರು ಹಾಗೂ ಹಾಸನ ಜಿಲ್ಲೆಯಲ್ಲಿ ಅರಣ್ಯ ಭೂಮಿಯನ್ನು ಗುರುತಿಸಲಾಗಿದೆ. ಇದನ್ನು ನೀರಾವರಿ ಇಲಾಖೆಗೆ ವರ್ಗಾವಣೆ ಮಾಡಬೇಕು. ಈ ವಿಚಾರವಾಗಿ ಪ್ರತ್ಯೇಕ ಸಭೆಯನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಅರಣ್ಯ ಸಚಿವರ ಬಳಿಯೂ ಮಾತನಾಡಲಾಗವುದು ಎಂದರು.
ಮಳೆ ಕಡಿಮೆಯಾಗುತ್ತಿದೆ, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ ಭಾಗದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗುತ್ತಿದೆ. ಬಿಜೆಪಿ ಅವಧಿಯಲ್ಲಿ ಕೊರಟಗೆರೆ ಬಳಿಯ ಬೈರಗೊಂಡ್ಲು ಜಲಾಶಯದ ನಿರ್ಮಾಣ ಯೋಜನೆಯನ್ನು ಬದಲಾವಣೆ ಮಾಡಿದ್ದರು. ಈ ಕಾರಣಕ್ಕೆ ಸ್ಥಳ ವೀಕ್ಷಣೆ ಮಾಡಬೇಕು. ಇಲ್ಲಿ ದೊಡ್ಡಬಳ್ಳಾಪುರದ ಒಂದಷ್ಟು ಭಾಗವೂ ಸೇರಿಕೊಂಡಿದೆ. ಪರಿಹಾರ ವಿಚಾರದಲ್ಲಿ ವ್ಯಾಜ್ಯಗಳಿವೆ. ಈ ಭಾಗದ ರೈತರು ಒಂದೇ ರೀತಿಯ ಪರಿಹಾರ ನೀಡಿ ಎಂದು ಹೇಳುತ್ತಿದ್ದಾರೆ. ದಸರಾ ನಂತರ ಎತ್ತಿನಹೊಳೆಯಿಂದ ಬೈರಗೊಂಡ್ಲುವರೆಗೂ ಸ್ಥಳ ವೀಕ್ಷಣೆ ನಡೆಸಿ ತೊಂದರೆಗಳನ್ನು ಪರಿಶೀಲನೆ ಮಾಡಲಾಗುವುದು ಎಂದರು.




