ಬೆಂಗಳೂರು: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿಬಿ ಜಿ ರಾಮ್ ಜಿ ಯೋಜನೆ ಸಾಧಕ ಬಾಧಕಗಳು ಬಹಿರಂಗ ಚರ್ಚೆಗೆ ಬರುವಂತೆ ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಷಿ ಅವರಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಸವಾಲು ಹಾಕಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎರಡು ಯೋಜನೆಗಳ ಬಗ್ಗೆ ಬಹಿರಂಗ ಚರ್ಚೆ ನಡೆಯಲಿ, ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ ಮೂಡಿಸಬಹುದು ಎಂದು ಹೇಳಿದರು.
ಈ ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿಗೊಂಡ ಮನರೇಗಾ ಯೋಜನೆಯಲ್ಲಿ 11 ಲಕ್ಷ ಕೋಟಿ ಅವ್ಯವಹಾರ ನಡೆದಿದೆ ಎಂಬ ಬಗ್ಗೆ, ಬಿಜೆಪಿ ರಾಜ್ಯಾಧ್ಯಕ್ಷರು, ವಿರೋಧ ಪಕ್ಷದ ನಾಯಕರು ಅಥವಾ ಕೇಂದ್ರ ಸಚಿವರು, ಈ ಮೂವರಲ್ಲಿ ಯಾರಾದರೂ ಒಬ್ಬರು ಮಾಧ್ಯಮ ವೇದಿಕೆ ಮೇಲೆ ಚರ್ಚೆಗೆ ಬರಲಿ ಎಂದು ಹೇಳಿದರು.
ನಾನು ಈ ವಿಚಾರವಾಗಿ ಚರ್ಚೆ ಮಾಡಲು ಸಿದ್ಧನಿದ್ದೇನೆ. ಈ ಯೋಜನೆಯಲ್ಲಿ ಅವ್ಯವಹಾರವಾಗಿದ್ದರೆ ಸಿಬಿಐ ತನಿಖೆಗೆ ನೀಡಲಿ. ಅದು ಎಷ್ಟೇ ಕೋಟಿ ಅವ್ಯವಹಾರವಾದರೂ ತಾಕತ್ತಿದ್ದರೆ ತನಿಖೆ ಮಾಡಿಸಲಿ. ಜವಾಬ್ದಾರಿಯುತ ಸ್ಥಾನದಲ್ಲಿರುವ ಯಾವುದೇ ನಾಯಕರು ಇಂತಹ ಆರೋಪ ಮಾಡಲು ಸಾಧ್ಯವಿಲ್ಲ, ಅವರು ನಿಜವಾಗಿಯೂ ಈ ರೀತಿ ಹೇಳಿದ್ದಾರಾ? ಎಂದರು.
ಮನರೇಗಾ ಉಳಿಸಲು 2 ದಿನಗಳ ವಿಶೇಷ ಅಧಿವೇಶನ ಕರೆಯುವ ಕುರಿತು ಪ್ರತಿಕ್ರಿಯಿಸಿ, 2 ದಿನ ವಿಶೇಷ ಅಧಿವೇಶನ ಕರೆದು ಈ ವಿಚಾರವಾಗಿ ಸಂಪೂರ್ಣ ಚರ್ಚೆ ಮಾಡಲಾಗುವುದು. ಬಿಜೆಪಿಯವರು ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಅಭಿಯಾನ ಮಾಡಲು ಪ್ರಯತ್ನಿಸುತ್ತಿದ್ದಾರೆ. ಅವರ ಕಾರ್ಯಕ್ರಮದ ಬಗ್ಗೆ ಅವರು ಸಮರ್ಥನೆ ಮಾಡಿಕೊಳ್ಳಲಿ, ಈ ಕಾರ್ಯಕ್ರಮದಿಂದ ಏನೆಲ್ಲಾ ಕೆಟ್ಟ ಪರಿಣಾಮ ಬೀರಲಿದೆ ಎಂದು ನಾವು ಹೇಳುತ್ತೇವೆ ಎಂದರು.




