ಕಾಂಗ್ರೆಸ್ ಭವನದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಯುವ ಕಾಂಗ್ರೆಸ್ ಪಕ್ಷದ ವತಿಯಿಂದ ಅದ್ದೂರಿಯಾಗಿ ಆಚರಣೆ
ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಜವಾಹರಲಾಲ್, ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹೆಚ್.ಎಸ್.ಮಂಜುನಾಥಗೌಡ ಸಲ್ಲಿಸಿದರು, ಯುವ ಕಾಂಗ್ರೆಸ್ ಪಕ್ಷದ ನೂರಾರು ಪದಾಧಿಕಾರಿಗಳು ಭಾಗವಹಿಸಿದ್ದರು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಇದೇ ಸಂದರ್ಭದಲ್ಲಿ ಮಾತನಾಡಿದ ಹೆಚ್.ಎಸ್.ಮಂಜುನಾಥಗೌಡ, ದೇಶ ಸ್ವಾತಂತ್ರ್ಯ ಲಭಿಸಿಲು ಯುವಕ, ಯುವತಿಯರು ಮಹತ್ವವಾದ ಪಾತ್ರ ವಹಿಸಿದರು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ಪಾಲ್ಗೊಂಡಿರುವ ಹೆಮ್ಮೆಯ ಸಂಗತಿಯಾಗಿದೆ. ದೇಶದ ಐಕ್ಯತೆ ,ಏಕತೆ, ಸಮಗ್ರತೆ ಸಂವಿಧಾನ ರಕ್ಷಣೆಗಾಗಿ ಪಣ ತೊಡೋಣ ಎಂದು ಕರೆನೀಡಿದರು.
ಮಹಾತ್ಮ ಗಾಂಧೀಜೀ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಇಂದಿನ ಯುವ ಸಮೂಹ ಸಾಗಬೇಕು ಎಂದರು.
ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಮತ್ತು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರ ನೇತೃತ್ವದಲ್ಲಿ 5 ಗ್ಯಾರಂಟಿ ಯೋಜನೆಗಳು ರಾಜ್ಯದ ಪ್ರತಿ ಕುಟುಂಬಗಳಿಗೆ ಯೋಜನೆ ಲಾಭ ಲಭಿಸಿದೆ. ಯುವ ಸಮೂಹಕ್ಕೆ ಕಾಂಗ್ರೆಸ್ ಪಕ್ಷ ಹೆಚ್ಚು ಸಹಕಾರ, ಬೆಂಬಲ ನೀಡುತ್ತಿದೆ, ಇಂದಿನ ಯುವ ಸಮೂಹವೇ ದೇಶದ ಸಂಪತ್ತು ಎಂದರು.




