ಎಸ್ಡಿಪಿಐ ಕಲಬುರಗಿ ಜಿಲ್ಲಾ ಸಮಿತಿ ಸಭೆ
ಕಲಬುರಗಿ: ಸೋಷಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕಲಬುರಗಿ ಜಿಲ್ಲಾ ಸಮಿತಿ ಸಭೆ ಜಿಲ್ಲಾಧ್ಯಕ್ಷ ಮೊಹಮ್ಮದ್ ಮೋಹಿಸಿನ್ ಅಧ್ಯಕ್ಷತೆಯಲ್ಲಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಅಪ್ಸರ್ ಕೊಡ್ಲಿಪೇಟೆ ಸಮ್ಮುಖದಲ್ಲಿ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಜರುಗಿತು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
76ನೇ ಗಣರಾಜ್ಯೋತ್ಸವದ ಅಂಗವಾಗಿ ಪಕ್ಷದ ಕಛೇರಿಯ ಮುಂಭಾಗದಲ್ಲಿ ಧ್ವಜಾರೋಹಣ ನೆರವೇರಿಸಿ ಆರಂಭವಾದ ಸಭೆಯನ್ನು ಉದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಭಾರತ ಜಾತ್ಯಾತೀತ ರಾಷ್ಟ್ರ. ಭಾರತದಲ್ಲಿ ಎಲ್ಲ ಪ್ರಜೆಗಳಿಗೂ ಸಮಾನ ಹಕ್ಕಿದೆ. ಶಿಕ್ಷಣ, ಸಮಾನತೆ, ವಾಕ್ ಸ್ವಾತಂತ್ರ್ಯ , ಇಚ್ಛೆಯ ಧರ್ಮವನ್ನು ಸ್ವೀಕರಿಸುವ ಹಕ್ಕುಗಳು, ಎಲ್ಲಿ ಬೇಕಾದರೂ ಜೀವಿಸುವ ಹಕ್ಕುಗಳು, ಹೀಗೆ ಇಷ್ಟೆಲ್ಲ ಸ್ವತಂತ್ರ ಹಕ್ಕುಗಳು ಇದ್ದರೂ, ದೇಶದ ಪ್ರಜೆಗಳ ಸಾಂವಿಧಾನಿಕ ಹಕ್ಕುಗಳನ್ನು ಕಸಿಯುವ ಪ್ರಯತ್ನ ಮಾಡುತ್ತಿರುವ ಎಲ್ಲಾ ದುಷ್ಟಶಕ್ತಿಗಳನ್ನು ಶಮನ ಮಾಡಿ ಹಸಿವು ಮತ್ತು ಭಯ ಮುಕ್ತ ರಾಷ್ಟ್ರ ನಿರ್ಮಾಣದ ಶಪಥ ಮಾಡೋಣ ಎಂದು ಕರೆ ನೀಡಿದರು.
ನಮಗೆ ಸಿಕ್ಕ ಸ್ವಾತಂತ್ರ್ಯವನ್ನು ಅನುಭವಿಸುವಾಗ, ಅದಕ್ಕಾಗಿ ತ್ಯಾಗ ಮಾಡಿದ ನಮ್ಮ ಪೂರ್ವಜರನ್ನು ಮರೆಯದಿರೋಣ ಎಂದು ಎಲ್ಲಾ ಭಾರತೀಯರಿಗೂ ಗಣರಾಜ್ಯೋತ್ಸವದ ಶುಭಾಶಯಗಳುನ್ನು ಕೋರಿದರು.
ಜಿಲ್ಲಾಧ್ಯಕ್ಷ ಮೋಹಿಸಿನ್ ಮಾತನಾಡಿ, ಕಲಬುರಗಿ ಮೂಲದ ಹಿರಿಯ ಕ್ಯಾನ್ಸರ್ ತಜ್ಞೆ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರಿಗೆ 2025ರ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಖ್ಯಾತ ಕ್ಯಾನ್ಸರ್ ತಜ್ಞೆ ಎಂದು ಹೆಸರಾಗಿರುವ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರು ಮೂಲತಃ ಕಲಬುರಗಿಯವರು. ತಂದೆ ಬಾಬುರಾವ್ ಸ್ವಾತಂತ್ಯ್ರ ಹೋರಾಟಗಾರರಾಗಿದ್ದರೆ, ತಾಯಿ-ರತ್ನಮ್ಮ ತರಕಾರಿ ಮಾರಾಟಗಾರರಾಗಿದ್ದರು. ಕಡುಬಡತನ ಮಧ್ಯೆ ಓದು ಮುಂದುವರಿಸಿದ ಅವರ ವಿದ್ಯಾಭ್ಯಾಸಕ್ಕೆ ಅವರ ತಾಯಿಯ ʼತಾಳಿʼ ಮಾರಿ ಶುಲ್ಕ ಕಟ್ಟಿದ್ದರು ಎಂಬುದನ್ನು ಸ್ಮರಿಸಿದರು.
ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜಲ್ವಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಿತು.
ಸ್ವಾತಂತ್ರ್ಯ ಬಂದು 7 ದಶಕಗಳು ಕಳೆದರೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ವಿಷಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸ್ಪಂದಿಸದೇ ಇರುವುದು ಖಂಡನೀಯ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ ನಿರಂತರ ಅನ್ಯಾಯವಾಗುತ್ತಿದ್ದು, ಈ ಭಾಗದ ಜನ ಪ್ರತಿನಿಧಿಗಳು ಇದರ ಬಗ್ಗೆ ಧ್ವನಿ ಎತ್ತಬೇಕು ಎಂದು ಸಭೆಯು ಆಗ್ರಹಿಸಿತು.
ರೈಲ್ವೆ ವಿಭಾಗದಿಂದ ಭಾರಿ ಲಾಭ ಕಲಬುರಗಿ ನಿಲ್ದಾಣದಲ್ಲಿ ಹೆಚ್ಚುವರಿ ರೈಲು ನಿಲುಗಡೆ, ಹೊಸ ಮತ್ತು ನೇರ ರೈಲು ಆರಂಭಿಸಿದರೆ ಐದು ಸಾವಿರಕ್ಕಿಂತ ಹೆಚ್ಚು ಉದ್ಯೋಗ ಸೃಷ್ಟಿ ಜತೆಗೆ ಟಿಕೆಟ್‌ಗಾಗಿ ಅಲೆದಾಟ ತಪ್ಪುತ್ತದೆ. ಬಡವರ ಸಂಚಾರ ಸಮಸ್ಯೆಗೆ ಮುಕ್ತಿ ಸಿಗಲಿದೆ. ಕೈಗಾರಿಕೆಗಳ ಅಭಿವೃದ್ಧಿಗೆ ಪೂರಕವಾಗಿ ಆರ್ಥಿಕ ಬಲ ದೊರೆಯುತ್ತದೆ. ಕೃಷಿ ಚಟುವಟಿಕೆಗಳಿಗೆ ಶಕ್ತಿ ತುಂಬಲು ಪೂರಕವಾಗಿರಲಿದೆ. ಅಧ್ಯಯನಕ್ಕೆ ಬರುವ ಅನ್ಯ ರಾಜ್ಯದ ವಿದ್ಯಾರ್ಥಿಗಳಿಗೂ ಅನುಕೂಲವಾಗಲಿದೆ. ಸೊಲ್ಲಾಪುರಗಳಿಂದ ರೈಲುಗಳಿವೆ. ಸೊಲ್ಲಾಪುರ ವಿಭಾಗಕ್ಕೆ ಶೇ.50 ಆದಾಯ ಕಲಬುರಗಿ, ಯಾದಗಿರಿ ಜಿಲ್ಲೆಯಿಂದ ಬರುತ್ತದೆ. ರೈಲ್ವೆ ವಿಭಾಗ ಆಗಬಾರದು ಎಂಬ ಷಡ್ಯಂತ್ರ ಹೂಡಿ ಈ ಭಾಗವನ್ನು ವಿವಿಧೆಡೆ ಹಂಚಿಕೆ ಮಾಡಲಾಗಿದೆ.
ಕಲ್ಯಾಣ ಕರ್ನಾಟಕ ಭಾಗದ ಕೈಗಾರಿಕೆ, ವಾಣಿಜ್ಯ, ಕೃಷಿ ಸೇರಿ ಸಮಗ್ರ ಅಭಿವೃದ್ಧಿಗೆ ಪೂರಕವಾದ ಸಾರ್ವಜನಿಕರ ಪ್ರಯಾಣಕ್ಕೆ ಅನುಕೂಲ ಕಲ್ಪಿಸುವ ಕಲಬುರಗಿ ರೈಲ್ವೆ ವಿಭಾಗೀಯ ಕಚೇರಿ ಸ್ಥಾಪನೆ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳು ಕೈಗೆತ್ತಿಕೊಂಡಿರುವ ಹೋರಾಟಕ್ಕೆ ಎಸ್ಡಿಪಿಐ ಪಕ್ಷವು ಸಂಪೂರ್ಣ ಬೆಂಬಲ ನೀಡುವ ನಿರ್ಣಯವನ್ನು ಕೈಗೊಳ್ಳಲಾಯಿತು.
ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಸೈಯದ್ ದಸ್ತಗೀರ್, ಮಕ್ಬೂಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಡಾ. ರಿಜ್ವಾನ್, ಇಬ್ರಾಹಿಂ ಪಟೇಲ್, ಕಾರ್ಯದರ್ಶಿಗಳಾಗಿ ಸೈಯದುದ್ದೀನ್ ಫಾರೂಕ್, ಶಕೀಲ್ ಪಟೇಲ್, ಖಜಾಂಚಿ ಗೌಸ್ ಕರಿಗಾರ್, ಸೈಯದ್ ಅಲೀಮ್ ಇಲಾಹಿ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು, WIM ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕನೀಜ್ ಫಾತಿಮಾ ಮತ್ತು ಎಲ್ಲಾ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು ಹಾಜರಿದ್ದರು.




